

ವಿಜಯಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಾರ್ಯಾಲಯದಿಂದ ಪ್ರಥಮ ಬಾರಿಗೆ ಹಮ್ಮಿಕೊಂಡ ಪ್ರೌಢಶಾಲೆಗಳ ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಬಿಎಲ್ಡಿಇ ಸಂಸ್ಥೆಯ ಎಸ್ಎಸ್ ಪದವಿ ಪೂರ್ವ ಕಾಲೇಜು ಮಾಧ್ಯಮಿಕ ವಿಭಾಗ "ಎ' ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ ಹಿನ್ನೆಲೆ ಶಾಲೆ ಆಡಳಿತ ಮಂಡಳಿಯಿಂದ ಶನಿವಾರ ಸನ್ಮಾನಿಸಿ ಗೌರವಿಸಲಾಯಿತು.
ಶಾಲೆಯ 10 ನೇ ತರಗತಿಯ ವಿದ್ಯಾರ್ಥಿ ಬಸವರಾಜ ಕರಡ್ಡಿ ಹಾಗೂ ಪುನೀತ್ ಬಿರಾದಾರ ಸನ್ಮಾನಿತ ಸಾಧಕ ಸೈಕ್ಲಿಸ್ಟ್ಗಳು. ವಿದ್ಯಾರ್ಥಿಗಳ ಈ ಸಾಧನೆಗೆ ಬಿಎಲ್ಡಿಇ ಸಂಸ್ಥೆ ಅಧ್ಯಕ್ಷರಾದ ಸಚಿವ ಎಂ.ಬಿ. ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆಂದು ಆಡಳಿತಾಧಿಕಾರಿ ಐ.ಎಸ್. ಕಾಳಪ್ಪನವರ ತಿಳಿಸಿದರು.
ಉಪ ಪ್ರಾಚಾಯೆರ್ ಕೆ.ಬಿ. ಪಾಟೀಲ, ದೈಹಿಕ ಶಿಕ್ಷಣ ಶಿಕ್ಷಕ ಕೆ.ವಿ. ಒಡೆಯರ್ ಮತ್ತಿತರರಿದ್ದರು.