ಕರಾಟೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Selection for national level in karate
Published on

ಮಡಿಕೇರಿ
ಕುಶಾಲನಗರದ ನ್ಯಾಷನಲ್ ಇನ್ಸಿಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟçಮಟ್ಟದ ಸಬ್ ಜೂನಿಯರ್ ಕರಾಟೆ ಚಾಂಪಿಯನ್ಷಿಪ್‌ಗೆ ಆಯ್ಕೆ ಆಗಿದ್ದಾರೆ. ಸಂಸ್ಥೆಯ 12 ವಿದ್ಯಾರ್ಥಿಗಳು ಬೆಂಗಳೂರಿನ ಕೋರಮಂಗಲ ಅಂತಾರಾಷ್ಟಿçÃಯ ಒಳಾಂಗಣ ಕ್ರೀಡಾಂಗಣದಲ್ಲಿ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ಇತ್ತೀಚೆಗೆ ನಡೆದ 15ನೇ ರಾಜ್ಯಮಟ್ಟದ ಸಬ್ ಜೂನಿಯರ್ ಕರಾಟೆ ಚಾಂಪಿಯನ್ಷಿಪ್ 2024ರಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದು, ಕುಮೇಟ್ ವಿಭಾಗದಲ್ಲಿ 3 ಚಿನ್ನ 2, ಬೆಳ್ಳಿ ಹಾಗೂ 1 ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಕುಶಾಲನಗರದ ಕರಾಟೆ ತರಬೇತುದಾರ ಸಂಕೇತ್ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಡಿಸೆಂಬರ್‌ನಲ್ಲಿ ದೆಹಲಿಯಲ್ಲಿ ನಡೆಯಲಿರುವ ಕಿಯೋ ರಾಷ್ಟçಮಟ್ಟದ ಸಬ್ ಜೂನಿಯರ್ ಕರಾಟೆ ಚಾಂಪಿಯನ್ಷಿಪ್ 2024ರಲ್ಲಿ ಸ್ಪರ್ಧೆ ಮಾಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net