ರಾಷ್ಟ್ರ ಮಟ್ಟದ ಕುಸ್ತಿ ಸ್ಪರ್ಧೆಗೆ ಆಯ್ಕೆ

12-nvl-2 kusti
Published on

ನವಲಗುಂದ: ಅಖಿಲ ಭಾರತೀಯ ನಾಗರಿಕ ಸೇವಾ ಸಮಿತಿಯಿಂದ ಇತ್ತೀಚೆಗೆ ದಾವಣಗೆರೆಯಲ್ಲಿ ಆಯೋಜಿಸಿದ್ದ 2022-23ನೇ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕುಸ್ತಿ ಕ್ರೀಡಾಕೂಟದಲ್ಲಿ ಪ್ರೀ ಸ್ಟೈಲ್ 74 ಕೆಜಿ ವಿಭಾಗದಲ್ಲಿ ಶಿರೂರ ಗ್ರಾಮದ ಗ್ರಾಮಲೆಕ್ಕಾಧಿಕಾರಿ ರೇವಣ್ಣಸಿದ್ದ ಡೆಂಗಿ ಪ್ರಥಮ ಸ್ಥಾನ ಪಡೆದಿದ್ದಾರೆ. ಡೆಂಗಿ ಅವರು ದೆಹಲಿಯಲ್ಲಿ ಅಕ್ಟೋಬರ್​ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net