

ಶನಿವಾರಸಂತೆ: ಇತ್ತೀಚಿಗೆ ಅರವತೋಕ್ಲುವಿನಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕಿಯರ ವಿಭಾಗದ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಿದ ಶನಿವಾರಸಂತೆ ಕಾವೇರಿ ವಿದ್ಯಾಸಂಸ್ಥೆಯ 7ನೇ ತರಗತಿ ವಿದ್ಯಾರ್ಥಿನಿ ಎ.ವಿ.ಸಮನ್ವಿ ಪ್ರಥಮ ಸ್ಥಾನ ಪಡೆದು ಅ.7 ರಂದು ಹಾವೇರಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದು, ಈಕೆ ಕೊಡಗು ಜಿಲ್ಲೆಯಿಂದ ಪ್ರತಿನಿಧಿಸಲಿದ್ದಾಳೆ ಎಂದು ಕಾವೇರಿ ವಿದ್ಯಾಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಸಮನ್ವಿ ಶನಿವಾರಸಂತೆ ಸಮೀಪದ ಅಪ್ಪಶೆಟ್ಟಳ್ಳಿ ಗ್ರಾಮದ ವೇಣು ಮತ್ತು ವನಿತಾ ದಂಪತಿ ಪುತ್ರಿಯಾಗಿದ್ದಾಳೆ.