

ಅರಕೇರಾ: ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆ ಹಾಗೂ ಮುಷ್ಟೂರು ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪ್ರೌಢ ಶಾಲೆ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿನಿ ಐಶ್ವರ್ಯ ಚನ್ನಪ್ಪ 3,000 ಮೀಟರ್ ಅಥ್ಲೆಟಿಕ್ಸ್‌ನಲ್ಲಿ ಪ್ರಥಮ ಹಾಗೂ 1,500 ಮೀಟರ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾಳೆ.
ಇದೇ ಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ಯಲ್ಲಪ್ಪ 1,500 ಮೀಟರ್ ಅಥ್ಲೆಟಿಕ್ಸ್‌ನಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾನೆ.
ಮುಷ್ಟೂರು ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿನಿ ರೋಹಿಣಿ ಬಸವರಾಜ 200 ಮೀಟರ್ ಅಥ್ಲೆಟಿಕ್ಸ್‌ನಲ್ಲಿ ಪ್ರಥಮ ಹಾಗೂ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ ಗಳಿಸಿದ್ದಾಳೆ. ಇದೇ ಶಾಲೆಯ ವಿದ್ಯಾರ್ಥಿ ರಾಹುಲ್ ಬಾಲಕರ ತ್ರಿವಿಧ ಜಿಗಿತ ಮತ್ತು ಉದ್ದ ಜಿಗಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.