ಟೆಕ್ವಾಂಡೋದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

web
Published on

ಧಾರವಾಡ: ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಟೆಕ್ವಾಂಡೋ ಪಂದ್ಯಾವಳಿಯಲ್ಲಿ ನಗರದ ಪ್ರಿಸಮ್ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದಿಲೀಪ ಆಯಟ್ಟಿ ೭೮ ಕೆಜಿ ಹಾಗೂ ವಾಣಿ ಆರ್. ಪತ್ತಾರ ೫೪ ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆೆ. ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನ ನಿರ್ದೇಶಕ ಶ್ರೀನಿವಾಸ ತಿಮ್ಮನಗೌಡರ, ಕಾರ್ಯದರ್ಶಿ ವೀಣಾ ಎಸ್. ತಿಮ್ಮನಗೌಡರ, ಪ್ರಾಚಾರ್ಯ ಎಸ್.ಎಂ. ಹುಲ್ಲೂರ, ದೈಹಿಕ ಶಿಕ್ಷಕರು, ಭೋದಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net