ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆ

 ಹನಿಯ.ಎ
ಹನಿಯ.ಎ
Published on

ವಿರಾಜಪೇಟೆ: ಇತ್ತೀಚೆಗೆ ಮಡಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಹನಿಯ. ಎ ಸಾಧನೆ ಮಾಡಿದ್ದಾಳೆ.

ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಚಿತ್ರದುರ್ಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾಳೆ. ಈಕೆ ಅಮ್ಮತ್ತಿಯ ಕಂದಾಯ ಇಲಾಖೆ ಪರಿವೀಕ್ಷಕ ಅನಿಲ್ ಹಾಗೂ ರಂಜಿನಿ ಪುತ್ರಿ. ಚಿತ್ರಕಲಾ ಶಿಕ್ಷಕ ಕ್ಲಿಫರ್ಡ್ ಡಿ ಮೆಲ್ಲೋ ಅವರಲ್ಲಿ ಚಿತ್ರಕಲೆ ತರಬೇತಿ ಪಡೆಯುತ್ತಿದ್ದಾಳೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net