

ವಿಜಯವಾಣಿ ಸುದ್ದಿಜಾಲ ಧಾರವಾಡ
ಗಾನಯೋಗಿ ಪಂ. ಪಂಚಾಕ್ಷರಿ ಗವಾಯಿಗಳ ಜಯಂತ್ಯುತ್ಸವ ನಿಮಿತ್ತ ಕಲಾ ವಿಕಾಸ ಪರಿಷತ್ ವತಿಯಿಂದ ಕಲಾವಿದರ, ಕಲಾ ಶಿಕ್ಷಣ ಸಂಸ್ಥೆ ಮತ್ತು ಕಲಾಪೋಷಕ ವ್ಯಕ್ತಿ ಅಥವಾ ಸಂಸ್ಥೆಗಳ ಅನುಪಮ ಸೇವೆ ಗುರುತಿಸಿ ನೀಡುವ "ಗಾನಯೋಗಿ ಪಂಚಾಕ್ಷರಿ ಅನುಗ್ರಹ' ರಾಷ್ಟ್ರೀಯ ಪ್ರಶಸ್ತಿ ಘೋಷಿಸಲಾಗಿದೆ.
ತಬಲಾ ವಾದಕ ಪಂ. ಶಾಂತಲಿಂಗಪ್ಪ ಹೂಗಾರ (ದೇಸಾಯಿ ಕಲ್ಲೂರ), ನಗರದ ಶ್ರೀ ಕುಮಾರೇಶ್ವರ ಕಲ್ಚರಲ್ ಸೊಸೈಟಿ ಹಾಗೂ ಶಿರಸಿಯಯ ಯ ಕಲಾಸಂಗಮ (ಕಲಾ ಶಿಕ್ಷಣ ಸಂಸ್ಥೆ) ಸಂಸ್ಥೆಗಳು ಆಯ್ಕೆಯಾಗಿವೆ. ಫೆ. 2ರಂದು ನಗರದ ಸಾಧನಕೇರಿಯ ಡಾ. ದ.ರಾ. ಬೇಂದ್ರೆ ಭವನದಲ್ಲಿ ಫೆ. 2ರಂದು ಬೆಳಗ್ಗೆ 10.30ಕ್ಕೆ ಏರ್ಪಡಿಸಿರುವ ಪಂಚಾಕ್ಷರಿ ಗವಾಯಿಗಳ ಜಯಂತ್ಯುತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.