

ಸಿದ್ದಾಪುರ: ಮಾಲ್ದಾರೆಯ ಸಹಕಾರ ಕೃಷಿ ಪತ್ತಿನ ಸಂಘದ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ನಂ.1 ಕನ್ನಡ ದಿನಪತ್ರಿಕೆ ವಿಜಯವಾಣಿಯ ನಾರಿ ನಿನಗೊಂದು ಸ್ಯಾರಿ ಸ್ಪರ್ಧೆಯ ವಿರಾಜಪೇಟೆ ಕ್ಷೇತ್ರದ ಲಕ್ಕಿ ಡ್ರಾ ಕಾರ್ಯಕ್ರಮದಲ್ಲಿ ಅದೃಷ್ಟಶಾಲಿಗಳನ್ನು ಆಯ್ಕೆ ಮಾಡಲಾಯಿತು.
ಜನಪರ ಸಂಘಟನೆಯ ಅಧ್ಯಕ್ಷ ಭಾವ ಮಾಲ್ದಾರೆ, ಅಂಗನವಾಡಿ ಶಿಕ್ಷಕರ ತಾಲೂಕು ಕಾರ್ಯದರ್ಶಿ ಲೀಲಾವತಿ, ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸುಜಿತಾ ಹಾಗೂ ತಂಡದ ಸದಸ್ಯರು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರಾಣಿ, ಹೇಮಾವತಿ ಮುಂತಾದವರು ಇದ್ದರು.