ಬಡ್ತಿ ಮುಖ್ಯಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

19 KRN-1
ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲೂಕುಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ-ಹಿರಿಯ ಹಾಗೂ ಬಡ್ತಿ ಮುಖ್ಯ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ರಾಮೇಗೌಡ, ಸಯ್ಯದ್ ರಿಜ್ವಾನ್, ದೇವರಾಜೇಗೌಡ, ಎಚ್.ಟಿ ಮಂಜುಳಾ, ದೇವಕುಮಾರ, ಎ.ಎಲ್.ಸುರೇಶ, ಎನ್.ಎಲ್.ರಾಮಪ್ರಸಾದ್, ಲೋಹಿತಾಶ್ವ, ಎನ್.ಕೆ.ಮಂಜುನಾಥ, ಸಿದ್ದೇಗೌಡ, ವೀರಭದ್ರ ಸ್ವಾಮಿ ಇದ್ದರು.
Published on

ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲೂಕುಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ-ಹಿರಿಯ ಹಾಗೂ ಬಡ್ತಿ ಮುಖ್ಯ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಸಯ್ಯದ್ ರಿಜ್ವಾನ್ ಆಯ್ಕೆಯಾಗಿದ್ದಾರೆ.

ಪಟ್ಟಣದ ಜಿಜಿಎಂಎಸ್ ಶಾಲೆಯಲ್ಲಿ ಇತ್ತೀಚೆಗೆ ಸಂಘದ ನಿಕಟಪೂರ್ವ ಅಧ್ಯಕ್ಷ ಟಿ.ಎನ್.ಕುಮಾರೇಗೌಡ ಅವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲಾ ಸಂಘದ ಗೌರವಾಧ್ಯಕ್ಷ ರಾಮಕೃಷ್ಣ, ಹಿರಿಯರಾದ ಪುಟ್ಟಯ್ಯ ಅವರ ಉಪಸ್ಥಿತಿಯಲ್ಲಿ ಬಡ್ತಿ ಮುಖ್ಯಶಿಕ್ಷಕರ ಸಮ್ಮುಖದಲ್ಲಿ ಆಯೋಜಿಸಿದ್ದ ಸಭೆಯಲ್ಲಿ 2024-25ನೇ ಸಾಲಿಗೆ ಬಡ್ತಿ ಮುಖ್ಯಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಕಾರ್ಯಕಾರಿಣಿ ಸಮಿತಿ ಹಾಗೂ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಸಂಘದ ಗೌರವಾಧ್ಯಕ್ಷರಾಗಿ ರಾಮೇಗೌಡ, ಅಧ್ಯಕ್ಷರಾಗಿ ಸಯ್ಯದ್ ರಿಜ್ವಾನ್, ಉಪಾಧ್ಯಕ್ಷರಾಗಿ ದೇವರಾಜೇಗೌಡ, ಎಚ್.ಟಿ.ಮಂಜುಳಾ, ದೇವಕುಮಾರ, ಪ್ರಧಾನ ಕಾರ್ಯದರ್ಶಿ ಎ.ಎಲ್.ಸುರೇಶ, ಖಜಾಂಚಿ ಎನ್.ಎಲ್.ರಾಮಪ್ರಸಾದ್, ಸಹಕಾರ್ಯದರ್ಶಿಗಳಾಗಿ ಲೋಹಿತಾಶ್ವ, ಎನ್.ಕೆ.ಮಂಜುನಾಥ, ಸಂಘಟನಾ ಕಾರ್ಯದರ್ಶಿಗಳಾಗಿ ಸಿದ್ದೇಗೌಡ, ವೀರಭದ್ರಸ್ವಾಮಿ ಆಯ್ಕೆಯಾಗಿದ್ದಾರೆ. ಉಳಿದಂತೆ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ, ಜಲೇಂದ್ರ, ಶಶಿಧರ, ಎಂ.ಸುಮಾಮಣಿ, ಮಂಜುರಾಜ್ ನೇಮಕಗೊಂಡರು.

ನೂತನ ಪದಾಧಿಕಾರಿಗಳನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿ.ಜೆ.ಅರುಣ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ರಾಜ್ಯ ಪರಿಷತ್ ಸದಸ್ಯರಾದ ಕೆ.ವಿ.ರಮೇಶ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರಾಜಶೇಖರ್, ಕಾರ್ಯದರ್ಶಿ ಚಿಕ್ಕಕೊಪ್ಪಲು ಸ್ವಾಮಿ, ದೈಹಿಕ ಶಿಕ್ಷಣಶಿಕ್ಷಕರ ಸಂಘದ ಅಧ್ಯಕ್ಷ ಗೋವಿಂದ, ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ತಿಮ್ಮಶೆಟ್ಟಿ, ಖಜಾಂಚಿ ರಾಜಯ್ಯ, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಭಾಸ್ಕರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಖಜಾಂಚಿ ಪ್ರಸನ್ನ, ಉಪಾಧ್ಯಕ್ಷ ಪುರುಷೋತ್ತಮ ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net