ದಸರಾ ಕುಸ್ತಿ ಪಂದ್ಯಾವಳಿಗೆ ಆಯ್ಕೆ ಪ್ರಕ್ರಿಯೆ

SAN_1816
Published on

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಅ.16 ರಿಂದ ಆರಂಭವಾಗುವ ಸಿ.ಎಂ.ಕಪ್ ದಸರಾ ಕುಸ್ತಿ ಪಂದ್ಯಾವಳಿಗೆ ಕುಸ್ತಿಪಟುಗಳ ಆಯ್ಕೆ ಪ್ರಕ್ರಿಯೆ ಬುಧವಾರ ನೆರವೇರಿತು.

ಕರ್ನಾಟಕ ರಾಜ್ಯ ಕುಸ್ತಿ ಸಂಘದ ಆಶ್ರಯದಲ್ಲಿ ನಗರದ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಆಯ್ಕೆ ಪ್ರಕ್ರಿಯೆಗೆ ರಾಜ್ಯದ ವಿವಿಧ ಭಾಗಗಳಿಂದ 300ಕ್ಕೂ ಹೆಚ್ಚು ಕುಸ್ತಿಪಟುಗಳು ಭಾಗವಹಿಸಿದ್ದರು.

ಹಿರಿಯರ 30ಕ್ಕೂ ಹೆಚ್ಚು ವಿಭಾಗಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಪ್ರತಿ ವಿಭಾಗದಲ್ಲೂ ಉತ್ತಮ ಪ್ರದರ್ಶನ ತೋರಿದ 8 ಸ್ಪರ್ಧಿಗಳನ್ನು ದಸರಾ ಕ್ರೀಡಾಕೂಟಕ್ಕೆ ಆಯ್ಕೆ ಮಾಡಲಾಯಿತು ಎಂದು ರಾಜ್ಯ ಕುಸ್ತಿ ಸಂಘದ ತಾಂತ್ರಿಕ ಅಧಿಕಾರಿ ಕೆ. ವಿನೋದ್‌ಕುಮಾರ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net