ವಿವಿ ಕ್ರಿಕೆಟ್ ತಂಡಕ್ಕೆ ಆಯ್ಕೆ ಪ್ರಕ್ರಿಯೆ

11-01-Shiva-3
ರಾಯಚೂರಿನ ಎಲ್‌ವಿಡಿ ಕಾಲೇಜು ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ರಾಯಚೂರು ವಿವಿಯ ಕ್ರಿಕೆಟ್ ತಂಡದ ಆಯ್ಕೆಗೆ ಪ್ರಕ್ರಿಯೆ ಕಾರ್ಯಕ್ರಮವನ್ನು ವಿವಿ ಕುಲಸಚಿವ ಡಾ.ಎಂ.ಯರ‌್ರಿಸ್ವಾಮಿ ಉದ್ಘಾಟಿಸಿದರು. ಎಲ್‌ವಿಡಿ ಕಾಲೇಜು ಪ್ರಾಚಾರ್ಯ ಡಾ.ವೆಂಕಟೇಶ ದೇವರು, ಕ್ರೀಡಾ ಸಮಿತಿ ಅಧ್ಯಕ್ಷ ಎಂ.ವಿಜಯಕುಮಾರ, ಸಿಟಿ ಎಲೆವನ್ ಕ್ಲಬ್ ಅಧ್ಯಕ್ಷ ಕೆ.ಶರಣರೆಡ್ಡಿ, ವಿವಿ ದೈಹಿಕ ಶಿಕ್ಷಣ ವಿಭಾಗದ ಸಂಯೋಜಕ ಮಲ್ಲಿಕಾರ್ಜುನ, ಕ್ರಿಕೆಟ್ ತರಬೇತುದಾರರಾದ ಪಾರ್ಥ ಸಾರಥಿ, ಬಸವರಾಜ ಇದ್ದರು.
Published on

ರಾಯಚೂರು: ನಗರದ ಎಲ್‌ವಿಡಿ ಕಾಲೇಜು ಮೈದಾನದಲ್ಲಿ ಬುಧವಾರ ರಾಯಚೂರು ವಿಶ್ವವಿದ್ಯಾಲಯದ ಕ್ರಿಕೆಟ್ ತಂಡದ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
ವಿವಿ ಕುಲಸಚಿವ ಡಾ.ಎಂ.ಯರ‌್ರಿಸ್ವಾಮಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಸ್ಪೂರ್ತಿಯೊಂದಿಗೆ ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.
ತಾರಾನಾಥ ಶಿಕ್ಷಣ ಸಂಸ್ಥೆ ಕ್ರೀಡಾ ಸಮಿತಿ ಅಧ್ಯಕ್ಷ ಎಂ.ವಿಜಯಕುಮಾರ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿನ ಕ್ರೀಡಾ ಪ್ರತಿಭೆಗಳಿದ್ದು, ಅದರಲ್ಲೂ ಕ್ರಿಕೆಟ್‌ನಲ್ಲಿ ಹಲವರು ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾಭ್ಯಾಸ ಮತ್ತು ಕ್ರೀಡೆಯಲ್ಲಿ ಸಮತೋಲನ ಕಾಯ್ದುಕೊಳ್ಳಬೇಕು ಎಂದು ಹೇಳಿದರು.
ಎಲ್‌ವಿಡಿ ಕಾಲೇಜು ಪ್ರಾಚಾರ್ಯ ಡಾ.ವೆಂಕಟೇಶ ದೇವರು ಮಾತನಾಡಿ, ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿದರೆ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಕ್ರೀಡಾ ಮೀಸಲಾತಿಯಲ್ಲಿ ನೌಕರಿ ದೊರೆಯಲಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಿಟಿ ಎಲೆವನ್ ಕ್ಲಬ್ ಅಧ್ಯಕ್ಷ ಕೆ.ಶರಣರೆಡ್ಡಿ, ವಿವಿ ದೈಹಿಕ ಶಿಕ್ಷಣ ವಿಭಾಗದ ಸಂಯೋಜಕ ಮಲ್ಲಿಕಾರ್ಜುನ, ಕ್ರಿಕೆಟ್ ತರಬೇತುದಾರರಾದ ಪಾರ್ಥ ಸಾರಥಿ, ಬಸವರಾಜ, ಉಪನ್ಯಾಸಕಿ ಡಾ.ಅರುಣಾ ಹಿರೇಮಠ, ಜಟ್ರಂ ಶ್ರೀನಿವಾಸ, ಸಂಪತ್ ಅಂಗಡಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net