ಆಯ್ಕೆ ಪ್ರಕ್ರಿಯೆ 16ರಂದು

51xLyHuokuL
Published on

ಧಾರವಾಡ: ರಾಜ್ಯ ಖೋ ಖೋ ಅಸೋಸಿಯೇಷನ್ ಸಹಯೋಗದಲ್ಲಿ ಬೆಂಗಳೂರಿನಲ್ಲಿ ನ. 24ರಿಂದ 26ರವರೆಗೆ ರಾಜ್ಯ ಮಟ್ಟದ ಚಾಂಪಿಯನ್‌ಶಿಪ್ ಪಂದ್ಯಾವಳಿ ಏರ್ಪಡಿಸಲಾಗಿದೆ. ಹೀಗಾಗಿ ಧಾರವಾಡ ಜಿಲ್ಲಾ ಖೋ ಖೋ ಅಸೋಸಿಯೇಷನ್ ವತಿಯಿಂದ 14 ವರ್ಷದೊಳಗಿನ ಬಾಲಕ, ಬಾಲಕಿಯರ ಜಿಲ್ಲಾ ತಂಡದ ಆಯ್ಕೆ ಪ್ರಕ್ರಿಯೆನ್ನು ನ. 16ರಂದು ಬೆಳಗ್ಗೆ 9 ಗಂಟೆಗೆ ಕೃಷಿ ವಿವಿ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಮೈದಾನದಲ್ಲಿ ಏರ್ಪಡಿಸಲಾಗಿದೆ.
ಆಸಕ್ತ ಕ್ರೀಡಾಪಟುಗಳು ಆಧಾರ ಕಾರ್ಡ್, ಭಾವಚಿತ್ರ, ಜನನ ಪ್ರಮಾಣಪತ್ರದೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಸಂಸ್ಥೆ ಅಧ್ಯಕ್ಷರನ್ನು ಸಂಪರ್ಕಿಸಬಹುದು ಎಂದು ಕಾರ್ಯದರ್ಶಿ ಚಿದಾನಂದ ನಾಯ್ಕರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net