

ತುಮಕೂರು: ಕ್ರೀಡಾಶಾಲೆ, ಕ್ರೀಡಾನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆ ಡಿ.18 ರಿಂದ 30 ರವರೆಗೆ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ. ಆಯಾ ತಾಲೂಕು ಕ್ರೀಡಾಂಗಣದಲ್ಲಿ ನಿಗದಿಗೊಳಿಸಿದ ದಿನಾಂಕ ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ವರೆಗೂ ಆಯ್ಕೆ ನಡೆಯಲಿದೆ.
ಕೊರಟಗೆರೆ ತಾಲೂಕು ಕ್ರೀಡಾಂಗಣದಲ್ಲಿ ಡಿ.18ರಂದು, ಮಧುಗಿರಿ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ಡಿ.19ರಂದು, ಪಾವಗಡ ತಾಲೂಕು ಕ್ರೀಡಾಂಗಣದಲ್ಲಿ ಡಿ.20ರಂದು, ಶಿರಾ ವಿವೇಕಾನಂದ ಕ್ರೀಡಾಂಗಣದಲ್ಲಿ ಡಿ.21ರಂದು, ಕುಣಿಗಲ್ ತಾಲೂಕು ಕ್ರೀಡಾಂಗಣದಲ್ಲಿ ಡಿ.22ರಂದು, ಚಿಕ್ಕನಾಯಕನಹಳ್ಳಿ ತಾಲೂಕು ಕ್ರೀಡಾಂಗಣದಲ್ಲಿ ಡಿ.26ರಂದು, ತುರುವೇಕೆರೆ ತಾಲೂಕು ಕ್ರೀಡಾಂಗಣದಲ್ಲಿ ಡಿ.27ರಂದು, ತಿಪಟೂರು ಕಲ್ಪತರು ಕ್ರೀಡಾಂಗಣದಲ್ಲಿ ಡಿ.28ರಂದು, ಗುಬ್ಬಿ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಡಿ.29ರಂದು, ತುಮಕೂರು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಡಿ.30ರಂದು ನಡೆಯಲಿದೆ.
ಪ್ರಸ್ತುತ 4ನೇ ತರಗತಿ, 7ನೇ ತರಗತಿ ಹಾಗೂ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆಸಕ್ತ ಬಾಲಕ, ಬಾಲಕಿಯರು ಭಾಗವಹಿಸಬಹುದು.