ಸ್ವಸಹಾಯ ಸಂಘ ಒಕ್ಕೂಟ ಸಮಾವೇಶ

Kmt samavesha
Published on

ಕುಮಟಾ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಸ್ವಸಹಾಯ ಸಂಘಗಳ ತಾಲೂಕು ಒಕ್ಕೂಟದ ಪದಾಧಿಕಾರಿಗಳ ಸಮಾವೇಶವನ್ನು ತಾಲೂಕಿನ ದೀವಗಿಯಲ್ಲಿರುವ ಹಾಲಕ್ಕಿ ಸಮಾಜ ಸಭಾಭವನದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಎನ್.ಆರ್. ಗಜು ಕಾರ್ಯಕ್ರಮ ಉದ್ಘಾಟಿಸಿದರು. ಒಕ್ಕೂಟದ ಅಧ್ಯಕ್ಷೆ ಶ್ಯಾಮಲಾ ಅಧ್ಯಕ್ಷತೆ ವಹಿಸಿದ್ದರು.
ಸ್ಟೇಟ್ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ಗೌತಮ, ಸಹಾಯಕ ಪ್ರಬಂಧಕಿ ಶ್ವೇತಾ ಹೊಸಮನಿ ಅವರು ಗ್ರಾಮಾಭಿವೃದ್ಧಿ ಯೋಜನೆ ಮತ್ತು ಬ್ಯಾಂಕ್ ನಡುವಿನ ಸಮನ್ವಯ, ಸೌಲಭ್ಯಗಳನ್ನು ವಿವರಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಜಿ.ಭಟ್ಟ, ಯೋಜನೆಯ ಜಿಲ್ಲಾ ನಿರ್ದೇಶಕ ಮಹೇಶ ಎಂ.ಡಿ. ಮಾತನಾಡಿದರು.
ಯೋಜನಾಧಿಕಾರಿ ಕಲ್ಮೇಶ ಎಂ. ತಾಲೂಕಿನ ಸಾಧನಾ ವರದಿ ವಿವರಿಸಿದರು. ಗ್ರಾಮಾಭಿವೃದ್ಧಿ ಯೋಜನೆಯು ಬೆಳೆದು ಬಂದ ಹಾದಿಯ ಕಿರುಚಿತ್ರ ಪ್ರದರ್ಶಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net