

ಲಿಂಗಸುಗೂರು: ಬಡ, ಮಧ್ಯಮ ವರ್ಗದ ಮಹಿಳೆಯರಿಗಾಗಿ ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಬದುಕು ಸಾಗಿಸಬೇಕೆಂದು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.
ತಾಪಂ ಸಭಾಂಗಣದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಗುರುವಾರ ಮಾತನಾಡಿದರು. ಸರ್ಕಾರದ ಹೊಲಿಗೆ ಯಂತ್ರ, ಹೈನುಗಾರಿಕೆ, ಕುರಿ ಸಾಕಣೆ, ಗಂಗಾ ಕಲ್ಯಾಣ ಸೇರಿದಂತೆ ನಾನಾ ಯೋಜನೆಗಳು ಕುಟುಂಬ ನಿರ್ವಹಣೆಗೆ ಸಹಕಾರಿಯಾಗಿವೆ. 37 ಜನ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತಿದ್ದು, ಮಹಿಳೆಯರು ಸ್ವಯಂ ಉದ್ಯೋಗದ ಮೂಲಕ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕೆಂದು ಹೇಳಿದರು.
ಎಂಎಲ್‌ಸಿ ಶರಣಗೌಡ ಪಾಟೀಲ್ ಬಯ್ಯಪುರ, ಬಿಜೆಪಿ ಮಂಡಲ ಅಧ್ಯಕ್ಷ ಅಯ್ಯಪ್ಪ ವಕೀಲ, ಪ್ರಮುಖರಾದ ಗಿರಿಮಲ್ಲನಗೌಡ ಪಾಟೀಲ್, ಹುಲ್ಲೇಶ ಸಾಹುಕಾರ, ಕೆ.ನಾಗಭೂಷಣ, ಮುದುಕಪ್ಪ ನಾಯಕ ಇದ್ದರು.