ಗ್ಯಾರಂಟಿ ಯೋಜನೆಗಳಿಂದ ಸ್ವಾವಲಂಬನೆ

11 mdg1
Published on

ಮೂಡಿಗೆರೆ: ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸ್ವಾವಲಂಬಿಗಳಾಗಿದ್ದಾರೆ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ಗೋಣಿಬೀಡಿನಲ್ಲಿ ಸೋಮವಾರ 18.84 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ನಾಡಕಚೇರಿ ಉದ್ಘಾಟಿಸಿ ಮಾತನಾಡಿ, ಗ್ಯಾರಂಟಿ ಯೋಜನೆಗೆ ಸರ್ಕಾರ ಹಣ ಖರ್ಚು ಮಾಡುತ್ತಿದ್ದರೂ ಅಭಿವೃದ್ಧಿ ಕಾಮಗಾರಿ ಕುಂಠಿತವಾಗಿಲ್ಲ. ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ವಿಪಕ್ಷಗಳ ಮುಖಂಡರ ಹೇಳಿಕೆಯಲ್ಲಿ ಹುರುಳಿಲ್ಲ. ಪ್ರಚಾರಕ್ಕಾಗಿ ಅಂತಹ ಹೇಳಿಕೆ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಅದನ್ನು ಸಹಿಸದ ವಿಪಕ್ಷ ನಾಯಕರು ಸರ್ಕಾರದ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ನಾನು ಶಾಸಕಿಯಾದ ನಂತರ 100 ಕೋಟಿ ರೂ.ಗೂ ಹೆಚ್ಚು ಅನುದಾನ ಬಳಸಿ ಕ್ಷೇತ್ರದಲ್ಲಿ ರಸ್ತೆ, ಶಾಲೆ, ಅಂಗನವಾಡಿ, ಸಮುದಾಯ ಭವನ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿ ಮಾಡಿಸಿರುವೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಕ್ಷೇತ್ರದ ವಿವಿಧಡೆ ಸೇತುವೆ ನಿರ್ಮಾಣಕ್ಕಾಗಿ 50 ಕೋಟಿ ರೂ. ಅನುದಾನ ತರಲಾಗಿದೆ. ಕಗ್ಗನಹಳ್ಳ ಸೇತುವೆ 27 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ಎಂದು ತಿಳಿಸಿದರು.

ಗೋಣಿಬೀಡು ಗ್ರಾಪಂ ಅಧ್ಯಕ್ಷ ಜಿ.ಎಸ್.ದಿನೇಶ್, ಉಪಾಧ್ಯಕ್ಷೆ ಸುಜಾತಾ, ಸದಸ್ಯರಾದ ರಾಧಾ ಸುಂದ್ರೇಶ್, ಜುಬೇದಾ, ಸುಮಿತ್ರಾ, ಆನಂದ, ಸುಧಾಮಣಿ, ಕೃಷ್ಣಪ್ಪ, ತಹಸೀಲ್ದಾರ್ ರಾಜಶೇಖರಮೂರ್ತಿ, ಉಪತಹಸೀಲ್ದಾರ್ ವೀಣಾ, ಕಂದಾಯ ನಿರೀಕ್ಷಕ ಮಂಜುನಾಥ್, ಪಿಎಸ್‌ಐ ಹರ್ಷವರ್ಧನ್, ಗ್ರಾಪಂ ಕಾರ್ಯದರ್ಶಿ ನಜೀರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಟಿ.ಜಗದೀಶ್, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಎ.ಜಿ.ಸುಬ್ರಾಯ ಗೌಡ, ಮುಖಂಡರಾದ ಜಕಾವುಲ್ಲಾ, ಮುನಾವರ್ ಪಾಷ, ಶೇಷೇಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net