ಆರ್ಥಿಕವಾಗಿ ಸದೃಢವಾದರೆ ಸ್ವಾವಲಂಬಿ ಜೀವನ ಸಾಧ್ಯ

scodvase
Published on

ಶಿರಸಿ: ಮಹಿಳೆಯರು ಆರ್ಥಿಕವಾಗಿ ಸದೃಢವಾದರೆ ಮಾತ್ರ ಸ್ವಾವಲಂಬಿ ಜೀವನ ನಡೆಸಲು ಸಾಧ್ಯ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ನಗರದ ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿ ನಿಯಮಿತದ 8ನೇ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷೆ ಸರಸ್ವತಿ ಎನ್. ರವಿ ಮಾತನಾಡಿ, ಕಳೆದ 8 ವರ್ಷಗಳಲ್ಲಿ ಸಾವಿರಾರು ಮಹಿಳೆಯರು ಹಲವಾರು ಆದಾಯೋತ್ಪನ್ನ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗಿದ್ದಾರೆ ಎಂದರು.

ಶಿರಸಿ ರೋಟರಿ ಇನ್ನರ್‌ವ್ಹೀಲ್ ಅಧ್ಯಕ್ಷೆ ಪುಷ್ಪಲತಾ ಭಟ್, ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ ನಾಯ್ಕ ಮಾತನಾಡಿದರು. ಎಸ್‌ಎಸ್‌ಎಲ್‌ಸಿ , ಪಿಯುಸಿಯಲ್ಲಿ ಶೇ. 95ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳನ್ನು, ಉತ್ತಮ ಸಾಧನೆ ಮಾಡಿದ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಸಹಕಾರಿಯ ಸಿಇಒ ಗಣಪತಿ ನಾಯ್ಕ, ಉಪಾಧ್ಯಕ್ಷೆ ಹೇಮಲತಾ ಚೌಗುಲೆ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net