ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲಿ

2savadatti1
Published on

ಸವದತ್ತಿ: ಅಂಗವಿಕಲರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆ ರೂಪಿಸಿದೆ. ಅವುಗಳ ಸದುಪಯೋಗ ಪಡೆದು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಭಾನುವಾರ ಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 20 ಜನ ಅಂಗವಿಕಲ ಲಾನುಭವಿಗಳಿಗೆ ಯಂತ್ರ ಚಾಲಿತ ತ್ರಿಚಕ್ರ ವಾಹನ ವಿತರಿಸಿ ಮಾತನಾಡಿ, ಅಂಗವಿಕಲರು ಉದ್ಯೋಗ ಹಾಗೂ ಮತ್ತಿತರ ವ್ಯವಸ್ಥೆಗಳಿಗೆ ಬೇರೆಯವರನ್ನು ಆಶ್ರಯಿಸಬೇಕಾದ ಅನಿವಾರ್ಯತೆ ಇದೆ. ಎಲ್ಲರಂತೆ ಬದುಕುವ ಜತೆಗೆ ಗೌರವಯುತ ಜೀವನ ನಡೆಸಬೇಕು. ಹೀಗಾಗಿ, ಅಂಗವಿಕರನ್ನು ಸಮಾಜದ

ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸಲಾಗುವುದು ಎಂದು ತಿಳಿಸಿದರು.

ಬಸವರಾಜ ಕಾರದಗಿ, ಪ್ರಭು ಪ್ರಭುನವರ, ಡಿ.ಡಿ.ಟೋಪೋಜಿ, ಯಲ್ಲಪ್ಪ ಗೊರವನಕೊಳ್ಳ, ದಿಲಾವರ ಸನದಿ, ಶಿವಕುಮಾರ ರಾಠೋಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net