

ಹುಣಸೂರು: ಹುಣಸೂರು ರೋಟರಿ ಸಂಸ್ಥೆ ವತಿಯಿಂದ ನಗರದ ವಿವಿಧ ಕಾಲೇಜುಗಳಲ್ಲಿ ಮತದಾನದ ಜಾಗೃತಿ ಅಂಗವಾಗಿ ಸೆಲ್ಫಿ ಸ್ಟ್ಯಾಂಡ್‌ಗಳನ್ನು ನೀಡಲಾಯಿತು.
ನಗರದ ಸರ್ಕಾರಿ ಮಹಿಳಾ ಕಾಲೇಜು ಮತ್ತು ಜ್ಞಾನಧಾರ ಕಾಲೇಜಿಗೆ ಸೆಲ್ಫಿ ಸ್ಟ್ಯಾಂಡ್ ನೀಡಿ ಮಾತನಾಡಿದ ರೋಟರಿ ಅಧ್ಯಕ್ಷ ರೊ.ಚನ್ನಕೇಶವ, ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ತಾಲೂಕಿನ ವಿವಿಧ ಕಾಲೇಜುಗಳಿಗೆ ಸೆಲ್ಫಿ ಸ್ಟ್ಯಾಂಡ್‌ಗಳನ್ನು ಪೂರೈಸಲಾಗುತ್ತಿದೆ. ಮತದಾನ ನಮ್ಮೆಲ್ಲರ ಪವಿತ್ರ ಕರ್ತವ್ಯ. ಮಾತ್ರವಲ್ಲದೇ ಜವಾಬ್ದಾರಿಯೂ ಕೂಡ ಹೌದು. ಸದೃಢ ಭಾರತ ನಿರ್ಮಾಣಕ್ಕಾಗಿ ಯುವ ಮತದಾರರು ತಪ್ಪದೇ ಮತ ಚಲಾಯಿಸಬೇಕು ಎಂದು ಕೋರಿದರು.
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ತಪ್ಪದೇ ಮತದಾನ ಮಾಡುವುದಾಗಿ ವಾಗ್ದಾನ ಮಾಡಿದರು. ರೋಟರಿ ಕಾರ್ಯದರ್ಶಿ ಡಾ.ಕೆ.ಪಿ.ಪ್ರಸನ್ನ ಇತರರು ಹಾಜರಿದ್ದರು.