ರೋಟರಿ ಸಂಸ್ಥೆಯಿಂದ ನಿಸ್ವಾರ್ಥ ಸೇವೆ

4ss2padagrahana
Published on


ಶನಿವಾರಸಂತೆ : ರೋಟರಿ ಸಂಸ್ಥೆಯು ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿರುವ ಏಕೈಕ ಸಂಸ್ಥೆಯಾಗಿದೆ ಎಂದು ರೋಟರಿ ಸಂಸ್ಥೆಯ ನಿರ್ಗಮಿತ ಜಿಲ್ಲಾ ಪ್ರಾಂತಪಾಲ ಸತೀಶ್ ಬೋಳೊರ್‌ಅಭಿಪ್ರಾಯಪಟ್ಟರು.


ಶನಿವಾರಸಂತೆ ರೋಟರಿ ಕ್ಲಬಿನ 2024-25ನೇ ಸಾಲಿನ ಪದಗ್ರಹಣ ಹಿನ್ನೆಲೆಯಲ್ಲಿ ಚನ್ನಳ್ಳಿ ಗ್ರಾಮದ ಏರಿ ರೆಸಾರ್ಟ್‌ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ಮಾತಾನಾಡಿದರು.


ರೋಟರಿ ಸಂಸ್ಥೆಯು ವಿಶ್ವದ 150 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ನಮ್ಮ ದೇಶದಲ್ಲಿ ಸಾವಿರಾರು ಸದಸ್ಯರು ರೋಟರಿ ಸಂಸ್ಥೆಯಲ್ಲಿ ತೊಡಗಿಸಿಕೊಂಡು ನಿಸ್ವಾರ್ಥದಿಂದ ಸಮಾಜ ಸೇವೆ ಮಾಡುತ್ತಿದ್ದಾರೆ ಎಂದರು.


ರೋಟರಿ ಸಂಸ್ಥೆಯ ಜಿಲ್ಲಾ ಸಹಾಯಕ ಪ್ರಾಂತಪಾಲ ಡಾ.ಹರಿ ಎ.ಶೆಟ್ಟಿ ಮಾತನಾಡಿ, ರೋಟರಿ ಸಂಸ್ಥೆಯು ಸಮಾಜ ಸೇವೆಯ ಮೂಲಕ ಜನಮನ್ನಣೆಗಳಿಸಿದೆ. ಸದಸ್ಯರು ಸಮಾಜಮುಖಿ ಕಾರ್ಯ ಮಾಡುವ ಮೂಲಕ ಸಮಾಜದಲ್ಲಿ ಗೌರವಕ್ಕೆ ಪಾತ್ರರಾಗಿದ್ದಾರೆ. ಶನಿವಾರಸಂತೆ, ಆಲೂರುಸಿದ್ದಾಪುರ, ಕೊಡ್ಲಿಪೇಟೆ ಮುಂತಾದ ಕಡೆಯಲ್ಲಿರುವ ರೋಟರಿ ಸಂಸ್ಥೆಯು ಸಮಾಜ ಸೇವೆಯ ಮೂಲಕವಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಶನಿವಾರಸಂತೆ ರೋಟರಿ ಸಂಸ್ಥೆಯ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವಿ.ಎಲ್.ವರ್ಷಿತ್ ಮತ್ತು ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಶ್ವೇತಾ ವಸಂತ್ ಅವರಿಗೆ ಅಧಿಕಾರ ಹಸ್ತಾಂತರಿಸಲಾಯಿತು. ಪದಗ್ರಹಣ ಸಮಾರಂಭದಲ್ಲಿ ರೋಟರಿ ಸಂಸ್ಥೆಯ ವಲಯ ಸೇನಾನಿ ಕೆ.ಪಿ.ಜಯಕುಮಾರ್, ರೋಟರಿ ಸಂಸ್ಥೆಯ ನಿಕಟ ಪೂರ್ವ ಅಧ್ಯಕ್ಷ ಎ.ಎಚ್.ಚಂದ್ರಕಾಂತ್, ನಿಕಟಪೂರ್ವ ಕಾರ್ಯದರ್ಶಿ ಎ.ಆರ್.ಸೋಮಶೇಖರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net