

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಕೆಎಂಸಿ ಆಸ್ಪತ್ರೆ ಮಂಗಳೂರು ಹಾಗೂ ರೋಟರಿ ಕ್ಲಬ್ ಫರಂಗಿಪೇಟೆ ಆಶ್ರಯದಲ್ಲಿ 129ನೇ ರಕ್ತದಾನ ಶಿಬಿರ ಫರಂಗಿಪೇಟೆಯಲ್ಲಿ ಭಾನುವಾರ ನಡೆಯಿತು.
ಜೆಪ್ಪು ಶ್ರೀ ಅಂಬಾಮಹೇಶ್ವರಿ ಭಜನಾ ಮಂದಿರದ ಅಧ್ಯಕ್ಷ ಸೀತಾರಾಮ ಎ. ಶಿಬಿರ ಉದ್ಘಾಟಿಸಿ ಮಾತನಾಡಿ, ಸೇವಾಂಜಲಿ ಪ್ರತಿಷ್ಠಾನದ ಕೃಷ್ಣಕುಮಾರ್ ಪೂಂಜ ಅವರ ಸೇವಾ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಿದೆ. ಮಕ್ಕಳಿಗೆ ಸಂಗೀತ, ನೃತ್ಯ, ಭಜನೆಯಂತಹ ಕಾರ್ಯಕ್ರಮ ನಡೆಸುವುದರ ಜತೆಗೆ ಜನರ ಪ್ರಾಣ ಉಳಿಸುವಂತಹ ರಕ್ತದಾನ ಶಿಬಿರ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ನಿರೀಕ್ಷಕ ಶಿವಕುಮಾರ್ ಬಿ. ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ನಿವೃತ್ತ ಅಧಿಕಾರಿ ಎಂ.ಆರ್.ನಾಯರ್ ಶುಭ ಹಾರೈಸಿದರು. ಕೆಎಂಸಿ ಆಸ್ಪತ್ರೆಯ ವೈದ್ಯ ಸ್ಟೀಫನ್, ಸೇವಾಂಜಲಿ ಕಾರ್ಯಕರ್ತ ಶಿವರಾಜ್ ಸುಜೀರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರಮುಖರಾದ ಪ್ರವೀಣ್ ಕಬೇಲ, ಆರ್.ಎಸ್.ಜಯರಾಮಲ್ ಕಟ್ಟೆ, ಪ್ರಶಾಂತ್ ತುಂಬೆ, ಅರ್ಜುನ್ ಪೂಂಜ, ದಿನೇಶ್ ತುಂಬೆ, ದಿನೇಶ್ ಶೆಟ್ಟಿ ಕೊಟ್ಟಿಂಜ, ಸುರೇಶ್ ರೈ ಪೆಲಪಾಡಿ, ನಾರಾಯಣ ಬಡ್ಡೂರು, ಪದ್ಮನಾಭ ಶೆಟ್ಟಿ ಪುಂಚಮೆ, ಹೂವಿನ ವ್ಯಾಪಾರಿ ಮಹಮ್ಮದ್ ಹನೀಫ್, ಜಯರಾಂ ತುಂಬೆ ಮೊದಲಾದವರು ಭಾಗವಹಿಸಿದ್ದರು. 66 ಯುನಿಟ್ ರಕ್ತ ಸಂಗ್ರಹವಾಯಿತು.