ನಿಸ್ವಾರ್ಥ ಸೇವೆ ಸಲ್ಲಿಕೆ ಅಗತ್ಯ, ಡಾ.ಎಂ.ಎ.ಬಾಲಸುಬ್ರಹ್ಮಣ್ಯ ಸಲಹೆ

vivek
ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ.ಎಂ.ಎ.ಬಾಲಸುಬ್ರಹ್ಮಣ್ಯ, ಡಾ.ಜಯಪ್ರಕಾಶ್ ಶೆಟ್ಟಿ, ಡಾ.ಶ್ರೀಪಾದ ಮೆಹಂದಲೆ, ನಿವೃತ್ತ ಯೋಧ ಬೆಳ್ಳಾಲ ಗೋಪಿನಾಥ್ ರಾವ್ ಉಪಸ್ಥಿತರಿದ್ದರು.
Published on

ಮಂಗಳೂರು: ಯಾವುದು ನಿಸ್ವಾರ್ಥವೋ ಅದು ನೈತಿಕ. ಯಾವುದು ಸ್ವಾರ್ಥವೋ ಅದು ಅನೈತಿಕ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಆದ್ದರಿಂದ ನಾವು ನಿಸ್ವಾರ್ಥವಾಗಿ ಸೇವೆ ಮಾಡಬೇಕು. ಬದುಕಿನಲ್ಲಿ ಆದರ್ಶ ಇರಬೇಕು ಎಂದು ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಲಹೆಗಾರ ಡಾ.ಎಂ.ಎ.ಬಾಲಸುಬ್ರಹ್ಮಣ್ಯ ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರ ವತಿಯಿಂದ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇರಳಕಟ್ಟೆಯ ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಜತೆ ಸಂವಾದ ಏರ್ಪಡಿಸಲಾಗಿತ್ತು. ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜಿನ ಅನಸ್ತೇಶಿಯಾ ವಿಭಾಗದ ಮುಖ್ಯಸ್ಥ ಡಾ.ಶ್ರೀಪಾದ ಮೆಹಂದಲೆ ಸಂವಾದ ಕಾರ್ಯಕ್ರಮ ನಿರ್ವಹಿಸಿದರು. ನಿಟ್ಟೆ ವಿಶ್ಯವಿದ್ಯಾಲಯದ ಆಡಳಿತ ವಿಭಾಗದ ವೈಸ್ ಡೀನ್ ಡಾ.ಜಯಪ್ರಕಾಶ್ ಶೆಟ್ಟಿ ಮಾತನಾಡಿದರು ನಿವೃತ್ತ ಯೋಧ ಬೆಳ್ಳಾಲ ಗೋಪಿನಾಥ್ ರಾವ್ ಉಪಸ್ಥಿತರಿದ್ದರು. ವಿವೇಕಾನಂದ ಅಧ್ಯಯನ ಕೇಂದ್ರದ ಸಂಯೋಜಕ ಶ್ರೀಪತಿ ಕಲ್ಲೂರಾಯ ಸ್ವಾಗತಿಸಿ, ನಿಟ್ಟೆ ವಿಶ್ವವಿದ್ಯಾಲಯದ ಎನ್ನೆಸ್ಸೆಸ್ ಸಂಯೋಜಕ ಶಶಿ ಕುಮಾರ್ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net