ಅಂತಾರಾಜ್ಯ ಸರ್ಕಾರಿ ಬಸ್ ಸೇವೆ ಹೆಚ್ಚಳ : ಶಾಸಕ ಸಿ.ಎಚ್.ಕುಂಞಂಬು ಭರವಸೆ

sanmana (1)
Published on

ಸುಳ್ಯ: ಪ್ರವಾಸಿ ತಾಣ ಕಾಸರಗೋಡು ಜಿಲ್ಲೆಯ ಬೇಕಲ ಕೋಟೆ ಮತ್ತು ಸುಬ್ರಹ್ಮಣ್ಯ ಸಂಪರ್ಕಿಸುವ ನಿಟ್ಟಿನಲ್ಲಿ ಬೇಕಲ, ಬಂದಡ್ಕ, ಸುಳ್ಯ, ಸುಬ್ರಹ್ಮಣ್ಯ ಅಂತಾರಾಜ್ಯ ವಾರ್ಗದಲ್ಲಿ ಸರ್ಕಾರಿ ಬಸ್ ಆರಂಭಿಸಲು ಎಲ್ಲ ಪ್ರಯತ್ನ ನಡೆಸಲಾಗುವುದು ಎಂದು ಉದುಮ ಕ್ಷೇತ್ರದ ಶಾಸಕ ಸಿ.ಎಚ್.ಕುಂಞಂಬು ಹೇಳಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಬಂದಡ್ಕ ಗ್ರಾಮ ಗೌಡ ಸಮಿತಿ ಸಹಕಾರದಲ್ಲಿ ಬಂದಡ್ಕದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಮಂಟಪ ಸಭಾಭವನದಲ್ಲಿ ನಡೆದ ಅರೆಭಾಷೆ ಗಡಿನಾಡ ಉತ್ಸವದ ಸಮಾರೋಪ ಸವಾರಂಭದಲ್ಲಿ ವಾತನಾಡಿದರು.

ಕರ್ನಾಟಕ ಅರೆಭಾಷಾ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ವಾವಜಿ ಅಧ್ಯಕ್ಷತೆ ವಹಿಸಿದ್ದರು. ಪೂರ್ವಾಧ್ಯಕ್ಷ ಪಿ.ಸಿ.ಜಯರಾಮ, ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ಮುಖ್ಯ ಅತಿಥಿಗಳಾಗಿದ್ದರು.

ಅಕಾಡೆಮಿ ಗೌರವ ಸದಸ್ಯ ಚಂದ್ರಶೇಖರ ಪೇರಾಲು ಸ್ವಾಗತಿಸಿದರು. ಉಪನ್ಯಾಸಕಿ ಬೇಬಿ ವಿದ್ಯಾ ಪಿ.ಬಿ. ನಿರೂಪಿಸಿದರು. ವೆಂಕಟ್ರಮಣ ಕೊಯಿಂಗಾಜೆ ವಂದಿಸಿದರು.

ಸಾಧಕರಿಗೆ ಸನ್ಮಾನ

ಶಿಕ್ಷಣ, ಕ್ರೀಡಾ ಕ್ಷೇತ್ರದ ಸಾಧಕ ಮುತ್ತಣ್ಣ, ಸಹಕಾರ ಕ್ಷೇತ್ರದ ಸಾಧಕ ಮೋನಪ್ಪ ಗೌಡ ಇಳಂದಿಲ, ಶಿಕ್ಷಣ ಕ್ಷೇತ್ರದ ಸಾಧಕ ಬಾಲಕೃಷ್ಣ, ಧಾರ್ಮಿಕ ಕ್ಷೇತ್ರದ ಸಾಧಕ ಭೋಜಪ್ಪ ಗೌಡ ಪಾಲಾರ್ ಮೂಲೆ, ಸವಾಜಸೇವಕ ಪುರುಷೋತ್ತಮ ಬೊಡ್ಡನಕೊಚ್ಚಿ, ಅರೆಭಾಷೆ ಪ್ರಥಮ ಮಹಿಳಾ ಜನಪ್ರತಿನಿಧಿ ಕುತ್ತಿಕೋಲು ಗ್ರಾ.ಪಂ.ನ ಧರ್ವಾವತಿ ಪಾಲಾರುಮೂಲೆ, ಧಾರ್ಮಿಕ ಕ್ಷೇತ್ರದಲ್ಲಿ ಸುಂದರ ಗೌಡ, ಕರಕುಶಲ ಮತ್ತು ಕೃಷಿ ಕ್ಷೇತ್ರದಲ್ಲಿ ಶಿವಣ್ಣ ಗೌಡ ವಾವಜಿ, ಕ್ರೀಡಾ ಕ್ಷೇತ್ರದ ಸಾಧಕ ಯಕ್ಷಿತ್ ಬಾಲೆಂಬಿ ಅವರನ್ನು ಸನ್ಮಾನಿಸಲಾಯಿತು. ಕೋಲ್ಚಾರು ಹಿರಿಯ ಪ್ರಾಥಮಿಕ ಶಾಲೆಗೆ ಅತ್ಯುತ್ತಮ ಗಡಿನಾಡ ಶಾಲೆ ಎಂದು ಗೌರವ ಅರ್ಪಿಸಲಾಯಿತು. ಗೌಡರ ಯುವ ಸೇವಾ ಸಂದ ಸ್ಥಾಪಕಾಧ್ಯಕ್ಷ ನಿತ್ಯಾನಂದ ಮುಂಡೋಡಿ ಸಾಧಕರನ್ನು ಸನ್ಮಾನಿಸಿದರು. ಕರ್ನಾಟಕ ಮೀನುಗಾರಿಕಾ ನಿಗಮದ ವಾಜಿ ಅಧ್ಯಕ್ಷ ಎ.ವಿ.ತೀರ್ಥರಾಮ ಬಹುವಾನ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net