ಚೆಯ್ಯಂಡಾಣೆಯಲ್ಲಿ ಅರೆಭಾಷೆ ಗಡಿನಾಡ ಉತ್ಸವ ಇಂದು

9.npk-,.1
ನಾಪೋಕ್ಲು ಸಮೀಪದ ಚೆಯಂಡಾಣೆಯಲ್ಲಿ ಅರೆ ಭಾಷೆ ಗಡಿನಾಡ ಉತ್ಸವಕ್ಕೆ ಭರದ ಸಿದ್ಧತೆ.
Published on

ನಾಪೋಕ್ಲು: ಅರೆಭಾಷೆ ಗಡಿನಾಡ ಉತ್ಸವಕ್ಕೆ ಸಮೀಪದ ಚೆಯ್ಯಂಡಾಣೆಯಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಚೆಯ್ಯಂಡಾಣೆ ನರಿಯಂದಡ ಅಯ್ಯಪ್ಪ ಯುವಕ ಸಂಘದ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವವು ಭಾನುವಾರ ಬೆಳಗ್ಗೆ 8.30 ಗಂಟೆಗೆ ಮಡಿಕೇರಿ ತಾಲೂಕು ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ನಡೆಯಲಿದೆ. ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ಶಾಮಿಯಾನ, ಆಟೋಟಕ್ಕೆ ವಿವಿಧ ಸಿದ್ಧತೆಗಳನ್ನು ಶನಿವಾರ ಕೈಗೊಳ್ಳಲಾಯಿತು.

ನರಿಯಂದಡ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷ ಬಿಳಿಯಂಡ್ರ ಹರಿಪ್ರಸಾದ್ ಮಾತನಾಡಿ, ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಪಾಲ್ಗೊಳ್ಳಲಿದ್ದಾರೆ. ಪೂರ್ವ ತಯಾರಿ ನಡೆಯುತ್ತಿದೆ. ಸಾವಿರಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದ್ದು ಶಾಮಿಯಾನ, ಆಸನಗಳ ಅವಸ್ಥೆ ಹಾಗೂ ಕ್ರೀಡಾಕೂಟಕ್ಕೆ ಸಂಬಂಧಿಸಿದ ಎಲ್ಲ ಸ್ಪರ್ಧೆಗಳಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿದೆ. ಸಂಘದ ಸದಸ್ಯರು ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದರು.

ಹಿರಿಯ ಸದಸ್ಯ ಪೊಕ್ಕೊಳಂಡ್ರ ಧನೋಜ್ ಮಾತನಾಡಿ, ಸರ್ಕಾರಿ ಶಾಲಾ ಮೈದಾನದಲ್ಲಿ ಅಯ್ಯಪ್ಪ ಯುವಕ ಸಂಘ ಹಾಗೂ ಅರೆ ಭಾಷೆ ಅಕಾಡೆವಿ ಸಹಯೋಗದಲ್ಲಿ ಗಡಿನಾಡ ಉತ್ಸವ ಚೆಯ್ಯಂಡಾಣೆ ಕಾರ್ಯಕ್ರಮ ಮಾಡುತ್ತಿರುವುದು ಸಂತಸ ತಂದಿದೆ. ನಮ್ಮ ಜನಾಂಗದವರಿಗೆ ಕ್ರೀಡೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನಾಂಗಬಾದವರು ಭಾಗವಹಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ವಿಧಾನಸಭೆ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ವಕೀಲರ ಸಂಘದ ಮಾಜಿ ಅಧ್ಯಕ್ಷ ಕೊಟ್ಟಕೇರಿಯನ ದಯಾನಂದ, ಪಾರಣೆ ಗೌಡ ಸಮಾಜದ ಅಧ್ಯಕ್ಷ ಮುಕ್ಕಟಿ ಕುಶಾಲಪ್ಪ, ಚೆಯ್ಯಂಡಾಣೆ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷ ಹರಿಪ್ರಸಾದ್ ಬೆಳಿಯಂಡ್ರ, ಮೈಸೂರು ಗೌಡ ಸಮಾಜದ ಮಾಜಿ ಅಧ್ಯಕ್ಷ ತೋಟಂಬೈಲು ಮನೋಹರ್, ಚೆಯ್ಯಂಡಾಣೆ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಪ್ರೇಮಕುಮಾರಿ, ಕೆದಮುಳ್ಳೂರು ಗ್ರಾ.ಪಂ. ಮಾಜಿ ಸದಸ್ಯ ಗೌಡುಧಾರೆ ಚೋಟು ಬಿದ್ದಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net