ವಿಚಾರ ಸಂಕಿರಣ 6ರಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕರ್ನಾಟಕ ಕಲಾ ಕಾಲೇಜಿನ ಸ್ನಾತಕ ಮತ್ತು ಸ್ನಾತಕೋತ್ತರ ಪ್ರವಾಸೋದ್ಯಮ ಅಧ್ಯಯನ ವಿಭಾಗವು ಥೈಲ್ಯಾಂಡಿನ ನಾರ್ಥ ಚಿಯಾಂಗ್​ ಮಯಿ ಯುನಿವರ್ಸಿಟಿ ಸಹಯೋಗದಲ್ಲಿ ಮಾ. 6ರಂದು ಬೆಳಗ್ಗೆ 10.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿಮಾನಯಾನ, ಆತಿಥ್ಯದ ಉದ್ಯಮ ಮತ್ತು ಪ್ರವಾಸೋದ್ಯಮ ಬದಲಾವಣೆಯಲ್ಲಿ ಕೃತಕ ಬುದ್ಧಿಮತ್ತೆಯ ಹೊಸ ಆಯಾಮಗಳು ಕುರಿತು ಒಂದು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಏರ್ಪಡಿಸಲಾಗಿದೆ.

ಥೈಲ್ಯಾಂಡಿನ ನಾರ್ಥ್​ ಚಿಯಾಂಗ್​ ಮಯಿ ಯುನಿವರ್ಸಿಟಿಯ ಕೃತಕ ಬುದ್ಧಿ ಮತ್ತೆ ವಿಭಾಗದ ಶೈಕ್ಷಣಿಕ ಡೀನ್​ ಕಿರಣ ಜಾಧವ ಅವರು "ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಹೊಸ ದಿಗಂತಗಳು' ಕುರಿತು ಉಪನ್ಯಾಸ ನೀಡಲಿದ್ದಾರೆ. ಡಾ. ರೋಹಿತ್​.ಕೆ, ಕವಿವಿ ವಿಶ್ರಾಂತ ಕುಲಸಚಿವ ಪ್ರೊ.ಎಸ್​. ರಾಜಶೇಖರ ಭಾಗವಹಿಸುವರು. ಕರ್ನಾಟಕ ಕಲಾ ಕಾಲೇಜಿನ ಐಕ್ಯೂಎಸಿ ವಿಭಾಗದ ಸಂಯೋಜಕ ಡಾ. ಐ.ಸಿ. ಮುಳಗುಂದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕರ್ನಾಟಕ ಕಾಲೇಜಿನ ಪ್ರವಾಸೋದ್ಯಮ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ಜಗದೀಶ. ಕೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net