

ಬೆಂಗಳೂರು: ಕಾವೇರಿ ನದಿ ರಕ್ಷಣಾ ಸಮಿತಿಯು ನದಿ ನೀರಿನ ಹಕ್ಕಿಗಾಗಿ ಒಂದು ದಿನದ ಕಾರ್ಯಾಗಾರ ಮತ್ತು ವಿಚಾರ ಸಂಕಿರಣವನ್ನು ಏ.5 (ಶನಿವಾರ) ಕ್ಕೆ ಹಮ್ಮಿಕೊಂಡಿದೆ.
ಕೆ.ಆರ್.ರಸ್ತೆಯಲ್ಲಿರುವ ಕೆಂಪೇಗೌಡ ಆಸ್ಪತ್ರೆ ಆವರಣದಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ಬೆಳಗ್ಗೆ 10ಕ್ಕೆ ಆರಂಭವಾಗುವ ವಿಚಾರ ಸಂಕಿರಣವನ್ನು ಆದಿಚುಂಚನಗಿರಿ ಸಂಸ್ಥಾನ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಸುಪ್ರೀಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ ದಿಕ್ಸೂಚಿ ಭಾಷಣ ಮಾಡಲಿದ್ದು, ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿಗಳಾದ ಎ.ಜೆ.ಸದಾಶಿವ, ಚಂದ್ರಶೇಖರಯ್ಯ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಸಚಿವ ರಾಮಲಿಂಗಾರೆಡ್ಡಿ, ಸಂಸದರಾದ ಡಾ.ಸಿ.ಎನ್.ಮಂಜುನಾಥ, ಯಧುವೀರ ಕೃಷ್ಣದತ್ತ ಒಡೆಯರ್ ಪಾಲ್ಗೊಳ್ಳಲಿದ್ದಾರೆ.
ನಂತರ ನಡೆಯುವ ವಿಚಾರ ಸಂಕಿರಣದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು, ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.
ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಶ್ರೀ ನಂಜಾವಧೂತ ಸ್ವಾಮೀಜಿ, ಶ್ರೀಮಾದಾರ ಚನ್ನಯ್ಯ ಸ್ವಾಮೀಜಿ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.