ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಗೆ ಬೀಳ್ಕೊಡುಗೆ

send off
Published on

ಕುಶಾಲನಗರ:

ಈಚೆಗೆ ನಿವೃತ್ತರಾದ ತಾಲೂಕಿನ ಬಸವನಹಳ್ಳಿ ಸರ್ಕಾರಿ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಎ.ಎ. ಲಕ್ಷ್ಮಣ್ ಅವರಿಗೆ ಶಾಲೆಯ ವತಿಯಿಂದ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷೆ ಲಿಜಿ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಲಕ್ಷ್ಮಣ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಶಾಲಾ ಮುಖ್ಯ ಶಿಕ್ಷಕಿ ಕೆ.ಎಂ. ಅಯ್ಯಚ್ಚು, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಸಿ.ಟಿ. ಸೋಮಶೇಖರ್ ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ಬಿ.ಪಿ. ಗುರುಬಸಪ್ಪ ಲಕ್ಷö್ಮಣ್ ಅವರ ಸೇವೆ ಬಗ್ಗೆ ಮಾತನಾಡಿದರು.

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಗಾಯಿತ್ರಿ, ತಾಲೂಕು ದೈಹಿಕ ಅಧೀಕ್ಷಕಿ ಎಂ.ಎಲ್. ಸುಕುಮಾರಿ, ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ಧನಪಾಲ್, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರತ್ನಕುಮಾರ್, ಕಾರ್ಯದರ್ಶಿ ಟಿ.ವಿ. ಶೈಲಾ, ನಿರ್ದೇಶಕ ಎಂ.ಎಸ್. ಮಹೇಂದ್ರ, ಮಾಜಿ ಕಾರ್ಯದರ್ಶಿ ಎಸ್. ನಾಗರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಎನ್. ಮಂಜುನಾಥ್, ತಾಲೂಕು ಘಟಕದ ಅಧ್ಯಕ್ಷ ಟಿ.ಕೆ. ಬಸವರಾಜ್, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕÀ ದೇವಾನಂದ್, ಸುರೇಶ್, ಎಚ್.ಪಿ.ಕರುಂಬಯ್ಯ, ವಿವಿಧ ಸಂಘಟನೆಗಳ ಪ್ರಮುಖರಾದ ಶ್ರೀನಿವಾಸ್,

ನಿವೃತ್ತ ಮುಖ್ಯ ಶಿಕ್ಷಕ ಮಾರ್ಷಲ್ ಲೋಬೋ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎಸ್.ಟಿ. ವೆಂಕಟೇಶ್, ಶಾಲಾ ಶಿಕ್ಷಕರು, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net