ಸರ್ಕಾರದ ಸಾಧನೆ ಮನೆಮನೆಗೂ ತಲುಪಲಿ

h2-BJP 3
Published on

ಹುಬ್ಬಳ್ಳಿ: ಕೇಂದ್ರ ಸರ್ಕಾರವು ಜಾತಿ-ಧರ್ಮ ನೋಡದೇ ಎಲ್ಲರಿಗೂ ಸವಲತ್ತು ಕಲ್ಪಿಸಿದೆ. ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಬಿಜೆಪಿ ರಾಜ್ಯ ಆರ್ಥಿಕ ಪ್ರಕೋಷ್ಠ ಸಂಚಾಲಕ ಸಮೀರ್ ಕಾಗಲಕರ ತಿಳಿಸಿದರು.ದೇಶಪಾಂಡೆ ನಗರದ ಶ್ರೀಕೃಷ್ಣ ಕಲ್ಯಾಣ ಮಂಟಪದಲ್ಲಿ ಗುರುವಾರ ಏರ್ಪಡಿಸಿದ್ದ ಬಿಜೆಪಿ ಧಾರವಾಡ ವಿಭಾಗ ಪ್ರಣಾಳಿಕೆ ಸಲಹಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾ ಮಟ್ಟದಲ್ಲಿ ತಂಡ ರಚಿಸಿ ಒಂದು ಕೋಟಿ ಜನರಿಗೆ ವಿಷಯ ಮುಟ್ಟಿಸಬೇಕು. ಕಾಂಗ್ರೆಸ್ ಬರೀ ಸುಳ್ಳು ಭರವಸೆ ನೀಡುತ್ತಿದೆ. ರಾಜ್ಯ ಹಾಗೂ ದೇಶ ಅಭಿವೃದ್ಧಿ ಆಗಬೇಕಾದರೆ ಬಿಜೆಪಿ ಬಹುಮತದಿಂದ ಆಯ್ಕೆಯಾಗಬೇಕು. ಇದಕ್ಕಾಗಿ ಎಲ್ಲರೂ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ವಿಭಾಗ ಪ್ರಭಾರಿ ಲಿಂಗರಾಜ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಪರೀಕ್ಷೆ ಎದುರಿಸಲು ನಾವೆಲ್ಲರೂ ಸಕಲ ಸನ್ನದ್ಧರಾಗಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬಗ್ಗೆ ಜನರಲ್ಲಿ ಒಲವು ಇದೆ. ಇನ್ನಷ್ಟು ಒಲವು ಬಲಗೊಳಿಸೋಣ. ಜನರ ಅಭಿಪ್ರಾಯ ಸಂಗ್ರಹಿಸಿ ಪ್ರಣಾಳಿಕೆ ರಚಿಸಲಾಗುತ್ತಿದೆ ಎಂದರು.

ಶಾಸಕರಾದ ಕಳಕಪ್ಪ ಬಂಡಿ, ಅರುಣಕುಮಾರ, ರಾಮಣ್ಣ ಲಮಾಣಿ, ವಿರೂಪಾಕ್ಷಪ್ಪ ಬಳ್ಳಾರಿ, ಎಂಎಲ್​ಸಿ ಪ್ರೊ.ಎಸ್.ವಿ. ಸಂಕನೂರ, ಪ್ರಮುಖರಾದ ಸುರೇಶಗೌಡ ಪಾಟೀಲ, ಸೀಮಾ ಮಸೂತಿ, ದತ್ತಮೂರ್ತಿ ಕುಲಕರ್ಣಿ, ಡಾ. ಬಸವರಾಜ ಕೇಲಗಾರ, ಡಾ. ಮಹೇಶ ನಾಲವಾಡ, ಸಿದ್ದರಾಜ ಕಲಕೋಟಿ, ಸಂಜಯ ಕಪಟಕರ, ಬಸವರಾಜ ಕುಂದಗೋಳಮಠ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net