ಮಕ್ಕಳನ್ನು ತಪ್ಪದೆ ಶಾಲೆಗೆ ಕಳಿಸಿ

ಬಳ್ಳಾರಿ ತಾಲೂಕಿನ ಕೊರ‌್ಲಗುಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಬಾಲ್ಯವಿವಾಹ ತಡೆ ಹಾಗೂ ಪೋಕ್ಸೋ ಜಾಗೃತಿ ಕಾರ್ಯಕ್ರಮದಲ್ಲಿ ನ್ಯಾ.ರಾಜೇಶ್ ಎನ್.ಹೊಸಮನೆ ಮಾತನಾಡಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ, ಡಿಡಿಪಿಐ ಉಮಾದೇವಿ, ಪಿಎಸ್‌ಐ ಕಾಳಿಂಗ, ಜಿಲ್ಲಾ ಬಾಲನ್ಯಾಯ ಮಂಡಳಿ ಸದಸ್ಯೆ ಪುಷ್ಪಲತಾ, ರೀಡ್ಸ್ ಸಂಸ್ಥೆ ನಿರ್ದೇಶಕ ತಿಪ್ಪೇಸ್ವಾಮಿ ಇತರರಿದ್ದರು.

Published on

ಬಳ್ಳಾರಿ: ಮಕ್ಕಳು ಪ್ರತಿದಿನ ಶಾಲೆಗೆ ಹಾಜರಾಗಬೇಕು ಜತೆಗೆ ಸ್ನೇಹಿತರನ್ನು ಕರೆತರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಹೇಳಿದರು.

ತಾಲೂಕಿನ ಕೊರ‌್ಲಗುಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಕ್ಕಳ ರಕ್ಷಣೆ, ಬಾಲ್ಯವಿವಾಹ ತಡೆ ಹಾಗೂ ಪೋಕ್ಸೋ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಾಲೆಯಿಂದ ಹೊರಗುಳಿದ ಮಕ್ಕಳ ಮೇಲೆ ಲೈಂಗಿಕ ಕಿರುಕುಳ, ದೌರ್ಜನ್ಯ ಮತ್ತು ಮಾನಸಿಕ-ದೈಹಿಕ ಹಿಂಸೆ ನಡೆಯುತ್ತಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಆದ್ದರಿಂದ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಈ ಕುರಿತು ಶಿಕ್ಷಕರು ನಿಗಾ ವಹಿಸಬೇಕು ಎಂದರು.

ಹಿರಿಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ ಚಂದ್ರಕಾಂತ್ ನಂದಾರೆಡ್ಡಿ ಮಾತನಾಡಿ, ಶಾಲೆಯಿಂದ ಹೊರಗುಳಿದ ಮಕ್ಕಳು ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ, ನಾಪತ್ತೆ, ಬಾಲಕಾರ್ಮಿಕ ಪದ್ಧತಿಗೆ ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇಂಥ ಸಮಯದಲ್ಲಿ ಪೊಲೀಸ್ ತುರ್ತು ಸಹಾಯವಾಣಿ 112 ಹಾಗೂ ಮಕ್ಕಳ ಸಹಾಯವಾಣಿ 1098ಕ್ಕೆ ಸಂಪರ್ಕಿಸಬಹುದು ಎಂದು ತಿಳಿಸಿದರು. ನಂತರ ಗ್ರಾಪಂ, ಪ್ರಾಥಮಿಕ ಮತ್ತು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ದಾಖಲಾತಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net