ವೈದ್ಯ ಸುರೇಶ್‌ಗೆ ಸೀನಿಯರ್ ಚೇಂಬರ್ ಸನ್ಮಾನ

nrp 5 (1)
Published on

ಎನ್.ಆರ್.ಪುರ: ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾ.ಸುರೇಶ್ 11ವರ್ಷದಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಅಧ್ಯಕ್ಷ ಎಸ್.ಎಸ್.ಜಗದೀಶ್ ಹೇಳಿದರು. ಮುತ್ತಿನಕೊಪ್ಪ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾ.ಸುರೇಶ್‌ರನ್ನು ಸನ್ಮಾನಿಸಿ ಮಾತನಾಡಿ, ಡಾ.ಬಿ.ಸಿ.ರಾಯ್ ಅವರ ಜನ್ಮ ದಿನವಾದ ಜುಲೈ 1ರಂದು ಪ್ರತಿ ವರ್ಷ ವಿಶ್ವ ವೈದ್ಯರ ದಿನಾಚರಣೆ ಆಚರಿಸಲಾಗುತ್ತಿದೆ. ಕರೊನಾ ಸಮಯದಲ್ಲೂ ತಮ್ಮ ಜೀವದ ಹಂಗು ತೊರೆದು ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ ಎಂದರು. ಸನ್ಮಾನ ಸ್ವೀಕರಿಸಿ ಡಾ.ಸುರೇಶ್ ಮಾತನಾಡಿ, ಈ ಭಾಗದ ಜನರು ನನ್ನ ಮೇಲೆ ಅಪಾರ ಪ್ರೀತಿ, ವಿಶ್ವಾಸ ತೋರಿಸಿದ್ದಾರೆ. ನನ್ನನ್ನು ಗುರುತಿಸಿ ಸನ್ಮಾನಿಸಿದ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಪದಾಕಾರಿಗಳಿಗೆ ಅಭಾರಿಯಾಗಿದ್ದೇನೆ ಎಂದರು. ಸಂಸ್ಥೆ ತಾಲೂಕು ಉಪಾಧ್ಯಕ್ಷ ದಕ್ಷಿಣಾಮೂರ್ತಿ, ಕಾರ್ಯದರ್ಶಿ ಕೃಷ್ಣ ಮೂರ್ತಿ, ಹಿರಿಯ ಆರೋಗ್ಯ ನಿರೀಕ್ಷಕರಾದ ದರ್ಶನಾಥ,ನಾಗೇಂದ್ರ ಪ್ರಸಾದ್, ನಿರ್ದೇಶಕರಾದ ಎಂ.ಆರ್.ಸುಂದರೇಶ್, ಎಚ್.ಎಸ್.ಸಂಜಯ್, ಎಚ್.ಟಿ.ಧನಂಜಯ, ಕುಮಾರ.ಜಿ.ಶೆಟ್ಟಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net