ಹಿರಿಯ ನಾಗರಿಕರಿಗೆ ಕ್ರೀಡಾ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Senior citizen
Published on

ಬೆಂಗಳೂರು: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ-2024 ರ ಅಂಗವಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸೆ. 4ರಂದು ಬೆಳಗ್ಗೆ 10 ಗಂಟೆಗೆ ಹಿರಿಯ ನಾಗರಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದೆ.

ನಗರದ ಹೊಸೂರು ರಸ್ತೆಯ ಸುಧಾರಣಾ ಸಂಸ್ಥೆಗಳ ಸಂಕೀರ್ಣದ ಸಂಭ್ರಮ ಸಭಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಾಗೂ ಹೊಸೂರು ರಸ್ತೆಯ ಸರ್ಕಾರಿ ಬಾಲಕರ ಬಾಲ ಮಂದಿರದ ಆವರಣ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಆಸಕ್ತ ಹಿರಿಯ ನಾಗರಿಕರು ಸೆ. 3ರೊಳಗೆ ಹೆಸರು ನೋಂದಣಿ ಮಾಡಿಕೊಳ್ಳಬಹುದಾಗಿದೆ.

ವಿವರಗಳಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕಿದ್ದಾಯಿ ಆಸ್ಪತ್ರೆ ಹಿಂಭಾಗ, ಸುಧಾರಣಾ ಸಂಕೀರ್ಣ, ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ ದೂರವಾಣಿ ಸಂಖ್ಯೆ: 080-29752324, ಜಾಲತಾಣ: dwd.ddwogmail.com ಗೆ ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net