ಹಿರಿಯ ನಾಗರಿಕರ ದಿನಾಚರಣೆ

Senior cityzen day
Published on

ಕಾರವಾರ: ಹಿರಿಯ ನಾಗರಿಕರನ್ನು ಪ್ರತಿಯೊಬ್ಬರು ಗೌರವದಿಂದ ಕಾಣಬೇಕು ಹಾಗೂ ವಿವಿಧ ಇಲಾಖೆಗಳಿಂದ ಹಿರಿಯ ನಾಗರಿಕರಿಗೆ ದೊರೆಯುವ ಸೌಲಭ್ಯಗಳು ಅವರಿಗೆ ತಲುಪುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ. ಎಮ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಕಾರವಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ, ಜಿಲ್ಲಾ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಮತ್ತು ತಾಲೂಕು ಸರ್ಕಾರಿ ನಿವೃತ್ತ ನೌಕರರ ಸಂಘಗಳು ಹಾಗೂ ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಹಿರಿಯ ನಾಗರಿಕರಿಗಾಗಿ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹಿರಿಯ ನಾಗರಿಕರಿಗೆ ಉದ್ದೇಶಿಸಿ ವಯಸ್ಸು ಒಂದು ಕೇವಲ ಸಂಖ್ಯೆಯಾಗಿರುತ್ತದೆ. ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸುವುದುರ ಬಗ್ಗೆ ನಮ್ಮಿಂದ ಆದಷ್ಟು ಬೇಗನೆ ಇದರ ಬಗ್ಗೆ ಪತ್ರ ಬರೆಯಲಾಗುವುದು. ಎಲ್ಲಾ ಹಿರಿಯ ನಾಗರೀಕರು ನಗುಮುಖದಿಂದ ಭಾಗವಹಿಸಲು ಬಂದಿರುವುದನ್ನು ನೋಡಿ ಖುಷಿಯಾಗುತ್ತಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ವಿರೂಪಾಕ್ಷಗೌಡ ಪಿ. ಪಾಟೀಲ ಅದ್ಯಕ್ಷತೆ ವಹಿಸಿ ಮಾತನಾಡಿ, ಹಿರಿಯ ನಾಗರಿಕರು ಉದ್ಯೋಗದಿಂದ ನಿವೃತ್ತಿಯಾಗಿರಬಹುದು ಜೀವನದಿಂದ ನಿವೃತ್ತಿಯಾಗಿರುವುದಿಲ್ಲ. ಇದೇ ತರಹ ಹೆಚ್ಚು ಹಿರಿಯ ನಾಗರಿಕರು ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಇಂತಹ ಕಾರ್ಯಕ್ರಮವನ್ನು ಇನ್ನು ಮುಂದೆ ವಿಜೃಂಭಣೆಯಿAದ ಆಚರಿಸಲಾಗುವುದು ಎಂದರು. ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತಿ ನೌಕರರ ಸಂಘ, ಜಿಲ್ಲಾ ಶಾಖೆಯ ವಿ. ಎಮ್. ಹೆಗಡೆ ಮಾತನಾಡಿ, ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಘಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಹಿರಿಯ ನಾಗರಿಕರ ಸಂಘದ ಅಭಿವೃದ್ಧಿಯಾಗಬೇಕು ಎಂದರು.

ಹಿರಿಯ ನಾಗರಿಕರ ಹಿತರಕ್ಷಣಾ ಸಂಘ ಅಧ್ಯಕ್ಷ /ಕಾರ್ಯದರ್ಶಿ ಎಮ್. ಆರ್. ನಾಯ್ಕ, ಮಾತನಾಡಿ, ಎಲ್ಲಾ ತಾಲೂಕುಗಳಲ್ಲಿ ಹಿರಿಯ ನಾಗರಿಕರ ಸಂಘಗಳು ಅಭಿವೃದ್ಧಿಯಾಗಿ, ಒಮ್ಮತದಿಂದ ಎಲ್ಲೂ ಸೇರಿ ಮುಂದಿನ ದಿನಗಳಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸೋಣ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ರಾಘವೇಂದ್ರ ಜಿ. ಭಟ್ಟ ಸ್ವಾಗತಿಸಿದರು. ವಿವಿಧ

ಇಲಾಖೆಯ ಅಧಿಕಾರಿ ಸಿಬ್ಬಂದಿಗಳು, ಹಿರಿಯ ನಾಗರೀಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net