ನಂತರ ಜು.18 ರಂದು 6264041770 ಸಂಖ್ಯೆಯಿಂದ ವಾಟ್ಸಾಪ್ ಸಂದೇಶ ಕಳುಹಿಸಿ, ಮನೆಯಲ್ಲಿರುವ ಚಿನ್ನಾಭರಣವನ್ನು ಅಡವಿಟ್ಟು ಹಣ ಕಳುಹಿಸುವಂತೆ ಸೂಚಿಸಿದ್ದಾರೆ. ಅದರಂತೆ ದೂರುದಾರರು ಮುತ್ತೂಟ್ ಫೈನಾನ್ಸ್‌ನಲ್ಲಿ ಚಿನ್ನಾಭರಣ ಅಡವಿಟ್ಟು 29 ಲಕ್ಷ ರೂ. ಸಾಲ ಪಡೆದಿದ್ದು, ಅದರಲ್ಲಿ 27.20 ಲಕ್ಷ ರೂ.ವನ್ನು ಐಸಿಐಸಿಐ ಬ್ಯಾಂಕ್ ಖಾತೆ ಸಂಖ್ಯೆ 488805000040 ಕ್ಕೆ ಆರ್‌ಟಿಜಿಎಸ್ ಮೂಲಕ ವರ್ಗಾಯಿಸಿದ್ದಾರೆ.