ಹಿರಿಯ ನಾಗರಿಕರು ಸಮಾಜದ ಆಸ್ತಿ

hiriya nagarikara dinacharane
Published on

ಮಡಿಕೇರಿ: ಹಿರಿಯ ನಾಗರಿಕರು ಸಮಾಜದ ಆಸ್ತಿ ಎಂದು ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಗುರುವಾರ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಿರಿಯ ನಾಗರಿಕರು ಸಮಾಜದ ಆಸ್ತಿ. ಇವರು ಪ್ರತಿಯೊಂದು ಕ್ಷೇತ್ರದಲ್ಲಿ ಮಾಡಿರುವಂತಹ ಸಾಧನೆಗಳು ಮಾದರಿಯಾಗಿವೆ. ಹಿರಿಯ ನಾಗರಿಕರ ಅನುಭವ ನಮಗೆ ದಾರಿದೀಪ ಎಂದರು.

ಹಿರಿಯ ನಾಗರಿಕರು ದೇಶದ ಸಂಪತ್ತು. ಇವರಿಗಾಗಿ ಸರ್ಕಾರವು ೧೦ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಹಿರಿಯ ನಾಗರಿಕರ ಪಾಲನೆ ಪೋಷಣೆ ಸಂರಕ್ಷಣೆ ಕಾಯ್ದೆ ೨೦೧೮ ಜಾರಿಗೊಳಿಸಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಹಿರಿಯರಿಗೆ ಮನವಿ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ಉಪ ನಿರ್ದೇಶಕ ಪ್ರಸನ್ನಕುಮಾರ್ ಮಾತನಾಡಿ, ಹಿರಿಯ ನಾಗರಿಕರಿಗಾಗಿ ಜಿಲ್ಲೆಯಲ್ಲಿ ಹಗಲು ಯೋಗಕ್ಷೇಮ ಕೇಂದ್ರ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಹಾಗೂ ವೃದ್ಧಾಶ್ರಮಗಳು ಇದೆ. ಇವುಗಳ ಸದುಪಯೋಗ ಪಡೆದುಕೊಂಡು ಹಿರಿಯ ನಾಗರಿಕರು ತಮಗೆ ಸರ್ಕಾರದಿಂದ ದೊರೆಯುವ ಉಚಿತ ಬಸ್‌ಪಾಸ್ ಆರೋಗ್ಯ ಸೇವೆ ಪಿಂಚಣಿ ಇತರೆ ಸೇವೆ ಪಡೆದುಕೊಳ್ಳಲು ಇಲಾಖೆಯನ್ನು ಸಂಪರ್ಕಿಸಲು ತಿಳಿಸಿದರು.

ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ವಿಮಲ ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net