ಹಿರಿಯ ನಾಗರಿಕರ ದಿನಾಚರಣೆ

Published on

ಚಿಕ್ಕಬಳ್ಳಾಪುರ: ನಗರದಲ್ಲಿನ ಸರ್​ ಎಂ.ವಿಶ್ವೇಶ್ವರಯ್ಯ ಕಬಡ್ಡಿ ಒಳಾಂಗಣ ಕ್ರೀಡಾಂಗಣದಲ್ಲಿ ಅ.10 ರಂದು ಬೆಳಗ್ಗೆ 11 ಕ್ಕೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಆಯೋಜಿಸಲಾಗಿದೆ.ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಕೈಗೊಂಡಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್​ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಪ್ರದಿಪ್​ ಈಶ್ವರ್​ ಅಯ್ಯರ್​ ವಹಿಸಲಿದ್ದಾರೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪಾ ಮತ್ತಿತರರು ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net