ಸಹಬಾಳ್ವೆಯೇ ಸಾಮಾಜಿಕ ನ್ಯಾಯದ ತತ್ವ

SPEACH
ಕುಷ್ಟಗಿಯ ದೇವರಾಜ ಅರಸು ಭವನದಲ್ಲಿ ಏರ್ಪಡಿಸಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಸರಸ್ವತಿ ದೇವಿ ಮಾತನಾಡಿದರು. ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶ್ರೀನಿವಾಸ ನಾಯಕ, ವಕೀಲರ ಸಂಘದ ಅಧ್ಯಕ್ಷ ವಿಜಯ ಮಹಾಂತೇಶ ಕುಷ್ಟಗಿ ಇದ್ದರು.
Published on

ಕುಷ್ಟಗಿ: ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಸರಸ್ವತಿ ದೇವಿ ಹೇಳಿದರು.

ಪಟ್ಟಣದ ದೇವರಾಜ ಅರಸು ಭವನದಲ್ಲಿ ತಾಲೂಕು ಕಾನೂನು ಸೇವಾಸಮಿತಿ, ವಕೀಲರ ಸಂಘ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯಲ್ಲಿ ಮಂಗಳವಾರ ಮಾತನಾಡಿದರು.

ಶಾಂತಿಯಿಂದ ಸಹಬಾಳ್ವೆ ಜೀವನ ಸಾಗಿಸುವುದು ಸಾಮಾಜಿಕ ನ್ಯಾಯದ ತತ್ವವಾಗಿದೆ. ವಿಶ್ವದಾದ್ಯಂತ ಲಿಂಗ, ಧರ್ಮ, ಸಂಸ್ಕೃತಿ ಇತರ ವಿಚಾರಗಳಲ್ಲಿನ ತಾರತಮ್ಯ ಹೋಗಲಾಡಿಸಲು ವಿಶ್ವ ಸಾಮಾಜಿಕ ನ್ಯಾಯ ದಿನದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶ್ರೀನಿವಾಸ ನಾಯಕ, ವಕೀಲರ ಸಂಘದ ಅಧ್ಯಕ್ಷ ವಿಜಯ ಮಹಾಂತೇಶ ಕುಷ್ಟಗಿ, ಸಹಾಯಕ ಸರ್ಕಾರಿ ಅಭಿಯೋಜಕ ಎಲ್.ರಾಯನಗೌಡ, ಅಪರ ಸರ್ಕಾರಿ ವಕೀಲ ಪರಸಪ್ಪ ಗುಜಮಾಗಡಿ, ಬಿಆರ್‌ಪಿ ದಾವಲಸಾಬ ವಾಲಿಕಾರ, ಕೋರ್ಟ್ ನೌಕರ ಸುನೀಲ್‌ಮಠ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net