ಹಿರಿಯ ಪತ್ರಕರ್ತ ಹನಮಂತ ಹೂಗಾರ ನಿಧನ

Hanumantha Hugar
Published on

ಹುಬ್ಬಳ್ಳಿ: ಹಿರಿಯ ಪತ್ರಕರ್ತ ಹನಮಂತ ಹೂಗಾರ (74) ಶುಕ್ರವಾರ ನಿಧನ ಹೊಂದಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಹಾಗೂ ಅಪಾರ ಬಂಧುಗಳಿದ್ದಾರೆ.

ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಹೂಗಾರ ಭಾಜನರಾಗಿದ್ದರು. ಇತ್ತೀಚೆಗೆ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡುವ 2020ನೇ ಸಾಲಿನ ‘ಜೀವಮಾನ ಸಾಧನೆ’ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ನೇತಾಜಿ, ವಿಶಾಲ ಕರ್ನಾಟಕ, ಪ್ರವರ್ತಕ, ಕುಟುಂಬ, ವಿಶ್ವವಾಣಿ ಸೇರಿ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಸದಸ್ಯರಾಗಿಯೂ ಒಂದು ಅವಧಿಗೆ ಅವರು ಕಾರ್ಯನಿರ್ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net