ಹಿರಿಯ ಪತ್ರಕರ್ತ ರಮೇಶ ಖಮಿತಕರ್ ನಿಧನ

IMG-20240718-WA0006
Published on

ಕಲಬುರಗಿ : ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಚಾರ ಪ್ರಪಂಚ ಕನ್ನಡ ದಿನಪತ್ರಿಕೆಯ ಸಂಪಾದಕ‌ ರಮೇಶ ಖಮಿತಕರ್ (64) ಅವರು ಬುಧವಾರ ನಿಧನರಾಗಿದ್ದಾರೆ.

ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ 11.10 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಗುರುವಾರ ಕಲಬುರಗಿ ನಗರದ ಗಂಜ್ ಪ್ರದೇಶದ ವಿ.ಆರ್.ಎಲ್. ಕಚೇರಿ ಬಳಿಯಿರುವ ರುದ್ರ ಭೂಮಿಯಲ್ಲಿ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net