ಹಿರಿಯ ನೇತಾರ ಮಾಣಿಗೋಪಾಲರ ಹೋರಾಟ ಮಾದರಿ

gan (3)
Published on

ಕುಂದಾಪುರ: ವಾಣಿಗೋಪಾಲರು ಶ್ರೀ ಸಾವಾನ್ಯರ ಜತೆಯಲ್ಲಿದ್ದುಕೊಂಡು, ಬಡವರ ಪರ, ಮೂರ್ತೆದಾರರ ಪರ ಹೋರಾಟ ವಾಡಿದವರು. ಆ ಕಾಲದಲ್ಲಿ ಅಂತಹ ಹೋರಾಟ ವಾಡಲು ಗಟ್ಟಿತನ ಇರಬೇಕು. ಬದುಕಿಗೊಂದು ಸ್ಪಷ್ಟ ನಿಲುವು ಬೇಕಿತ್ತು. ಅದೆರಡು ಅವರಲ್ಲಿತ್ತು. ಇಡೀ ಬದುಕಿನುದ್ದಕ್ಕೂ ಸತ್ಯ, ನ್ಯಾಯ, ಧರ್ಮದ ಪರ ಹೋರಾಡಿ, ರಾಜಕೀಯದಲ್ಲೂ ಶುದ್ಧ ಚಾರಿತ್ರ್ಯವನ್ನು ಉಳಿಸಿಕೊಂಡಿದ್ದರು ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಹೇಳಿದರು.

ಕುಂದಾಪುರ ಬೋರ್ಡ್ ಹೈಸ್ಕೂಲ್ ವಠಾರದ ರೋಟರಿ ಕಲಾಮಂದಿರದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಟಕ ವತಿಯಿಂದ ಸಾವಾಜಿಕ ಹೋರಾಟಗಾರ, ಹಿರಿಯ ನೇತಾರ ವಾಣಿ ಗೋಪಾಲ್ ಅವರ ಆತ್ಮಕಥನ ‘ನಾನು ವಾಣಿಗೋಪಾಲ’ ಪುಸ್ತಕವನ್ನು ಶನಿವಾರ ಬಿಡುಗಡೆಗೊಳಿಸಿ ವಾತನಾಡಿದರು.

ಶಾಸಕ ಕಿರಣ್ ಕುವಾರ್ ಕೊಡ್ಗಿ, ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ವಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ವಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿದರು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಿದ್ದರು. ವಾಣಿಗೋಪಾಲ್ ಹಾಗೂ ಗಿರಿಜಾ ದಂಪತಿಯನ್ನು ಸನ್ಮಾನಿಸಲಾಯಿತು.

ಕಸಾಪ ಸ್ಥಾಪಕಾಧ್ಯಕ್ಷ ಎ.ಎಸ್.ಎನ್.ಹೆಬ್ಬಾರ್, ಕಸಾಪ ತಾಲೂಕು ಅಧ್ಯಕ್ಷ ಡಾ.ಉಮೇಶ್ ಪುತ್ರನ್, ಪುರಸಭೆ ಅಧ್ಯಕ್ಷ ಮೋಹನದಾಸ್ ಶೆಣೈ, ಪುಸ್ತಕ ರಚಿಸಿದ ಕೇಶವ ಸಸಿಹಿತ್ಲು, ಪುತ್ರ ರಂಜನ್ ವಾಣಿಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ ಶೆಟ್ಟಿ ಪ್ರಸ್ತಾವಿಸಿದರು. ನರೇಂದ್ರ ಕುವಾರ್ ಕೋಟ ಸ್ವಾಗತಿಸಿ, ಮನೋಹರ್ ಭಟ್ ವಂದಿಸಿದರು. ಕುಂದಪ್ರಭದ ಯು.ಎಸ್.ಶೆಣೈ ಪುಸ್ತಕ ಪರಿಚಯಿಸಿದರು. ದಿನಕರ ಆರ್.ಶೆಟ್ಟಿ, ಮಂಜುನಾಥ ಕೆ.ಎಸ್., ಅಕ್ಷತಾ ಗಿರೀಶ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net