ಹಿರಿಯ ಸಾಹಿತಿ ಡಾ. ಗುರುಲಿಂಗ ಕಾಪಸೆ ಇನ್ನಿಲ್ಲ

27 Dwd 3 (Dr. Gurulinga Kapase)
Published on

ಧಾರವಾಡ: ಹಿರಿಯ ಸಾಹಿತಿ, ಇಲ್ಲಿನ ಸಪ್ತಾಪುರದ ದುರ್ಗಾ ಕಾಲನಿ ನಿವಾಸಿ ಡಾ. ಗುರುಲಿಂಗ ಕಾಪಸೆ (೯೬) ಬುಧವಾರ ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಶಿಷ್ಯ ಬಳಗವಿದೆ. ಮಧ್ಯಾಹ್ನ ೨ ಗಂಟೆವರೆಗೆ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಜಿಲ್ಲಾಽಕಾರಿ ದಿವ್ಯ ಪ್ರಭು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಉಸ್ತುವಾರಿ ಸಚಿವ ಸಂತೋಷ ಲಾಡ್, ಇತರರು ಅಂತಿಮ ದರ್ಶನ ಪಡೆದರು. ವಾಗ್ದಾನದಂತೆ ಬೈಲಹೊಂಗಲದ ಖಾಸಗಿ ಆಸ್ಪತ್ರೆಗೆ ದೇಹದಾನ ಮಾಡಲಾಯಿತು.
ಡಾ. ಕಾಪಸೆ ಅವರು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಿ.ಕೆ. ಲೋಣಿಯಲ್ಲಿ ೧೯೨೮ರ ಏ. ೨ರಂದು ಜನಿಸಿದ್ದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕಗಾಗಿ ಕಾರ್ಯನಿರ್ವಹಿಸಿದ್ದರು. ನಿವೃತ್ತಿಯ ನಂತರ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net