

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ಎಮ್ ಕೃಷ್ಣ (S. M. Krishna ) ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ (Manipal Hospital) ದಾಖಲಾಗಿದ್ದಾರೆ. 92 ವರ್ಷದ ಎಸ್ಎಮ್ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಎಸ್ಎಮ್ ಕೃಷ್ಣ ಅವರು ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಇಂದು (ಅ.19) ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಎಸ್ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.