ಹಿರಿಯ ರಂಗಕರ್ಮಿ ವಿಮಲಾ ರಂಗಾಚಾರ್ ಇನ್ನಿಲ್ಲ

vimal
Published on

ಬೆಂಗಳೂರು: ಹಿರಿಯ ರಂಗ ಕಲಾವಿದೆ, ಸಂಘಟಕಿ, ಲಲಿತಕಲೆಗಳ ಪೋಷಕರಾಗಿದ್ದ ವಿಮಲಾ ರಂಗಾಚಾರ್ (97) ಮಂಗಳವಾರ ಸಂಜೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಂಗಳೂರಿನ ಎಂಇಎಸ್ ಸಂಸ್ಥೆಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿಸಿದ್ದ ಅವರು ಮಲ್ಲೇಶ್ವರದ ಸೇವಾ ಸದನವನ್ನು ಕಟ್ಟಿ ಬೆಳೆಸಿದ್ದರು. ಕಮಲಾದೇವಿ ಚಟ್ಟೋಪಾಧ್ಯಾಯ ಅವರು ಕಟ್ಟಿ ಬೆಳೆಸಿದ್ದ ಭಾರತೀಯ ನಾಟ್ಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಎಡಿಎ ರಂಗಮಂದಿರದ ಗೌರವ ಕಾರ್ಯದರ್ಶಿಯಾಗಿ ದುಡಿದಿದ್ದಾರೆ.

ಮೃತರ ಪುತ್ರಿ ರೇವತಿ ವಿದೇಶದಲ್ಲಿದ್ದು, ಅವರು ಬಂದ ನಂತರ ವಿಮಲಾ ಅವರ ಅಂತ್ಯಕ್ರಿಯೆಯು ನಾಳೆ (ಗುರುವಾರ) ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net