

ಕಾರವಾರ: ಹಿರಿಯ ಸಾಹಿತಿ ಹಾಗೂ ವಿಜಯವಾಣಿ ಅಂಕಣಕಾರ ನಾ.ಸು. ಭರತನಹಳ್ಳಿ (84) ಅವರು ಶುಕ್ರವಾರ ವಿಧಿವಶರಾಗಿದ್ದಾರೆ.
70 ನೇ ವಯಸ್ಸಿನಲ್ಲಕ ಅವರಿಗೆ 'ಸನ್ಮತಿ' ಎಂಬ ಅಭಿನಂದನಾ ಗ್ರಂಥ ಸಮರ್ಪಿಸಲಾಗಿದೆ. ಪ್ರೊ.ಟಿ.ಜಿ.ಭಟ್ಟ ಹಾಸಣಗಿ ಅವರು ನಾ.ಸು ಕುರಿತು 'ಅವ್ಯಾಹ ಪ್ರೀತಿ' ಎಂಬ ಕೃತಿ ಬರೆದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ 14 ನೇ ಸಾಹಿತ್ಯ ಸಮ್ಮೇಳನದಲ್ಲಿ ಹಾಗೂ ಯಲ್ಲಾಪುರ ತಾಲೂಕಿನ ಪ್ರಥಮ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ಕೆ.ಶ್ಯಾಮರಾವ್ ದತ್ತಿ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕರ್ನಾಟಕಶ್ರೀ ಪ್ರಶಸ್ತಿ, ಕಾಸರಗೋಡಿನ ಕಯ್ಯಾರ ಕಿಞ್ಞಣ್ಣ ರೈ ಪ್ರಶಸ್ತಿ, ರಾಜ್ಯ ಸಾಹಿತ್ಯ ಅಕಾಡೆಮಿಯ ಗ್ರಂಥ ಪ್ರಶಸ್ತಿ, ಸಾಹಿತ್ಯ ಅಕಾಡೆಮಿ ಸುವರ್ಣ ಗೌರವ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ನಾ.ಸು ಭಾಜನರಾಗಿದ್ದರು.
ಭರತನಹಳ್ಳಿ ಅವರು ಸೊಸೆ, ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.