

ವಿಜಯವಾಣಿ ಸುದ್ದಿಜಾಲ ಉಡುಪಿ
ಯಕ್ಷಗಾನದ ಖ್ಯಾತ ಹಿರಿಯ ಕಲಾವಿದ 'ಡೈನಾಮಿಕ್ ಸ್ಟಾರ್' ಎಂದೇ ಹೆಸರಾದ ಹಾಗೂ 'ಅಭಿನಯ ಚಕ್ರವರ್ತಿ' ಬಿರುದಾಂಕಿತ ವಿದ್ಯಾಧರ ರಾವ್ ಜಲವಳ್ಳಿ ಅವರು ಯಕ್ಷ ಸಾಧಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು 10 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಕಾರ್ಯಕ್ರಮದ ಬಳಿಕ ಬಡಗುತಿಟ್ಟಿನ ಕಲಾವಿದರ ಕೂಡುವಿಕೆಯಲ್ಲಿ ಕೃಷ್ಣಾರ್ಜುನ ಕಾಳಗ ಹಾಗೂ ರಾಜಾ ಭದ್ರಸೇನ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ.ಜಗದೀಶ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.