ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ

ಹೊಸಪೇಟೆ ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾ ಸಿಳ್ಳೆಕ್ಯಾತ ಕ್ಷೇಮಾಭಿವೃದ್ಧಿ ಸಂಘ, ದಲಿತ, ಪಗ್ರತಿ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಸದಸ್ಯರಾದ ಸಿದ್ದು, ಕಿನ್ನೂರಿ ಶೇಖಪ್ಪ, ಜೆ.ರಮೇಶ, ಶೇಖರ್, ಜಂಬಯ್ಯ ನಾಯ್ಕ, ಸತ್ಯಮೂರ್ತಿ, ರಮೇಶ್, ಹಂಪಯ್ಯ, ಮಾರುತಿ, ರಾಜಕುಮಾರ, ಲಿಂಗಪ್ಪ ಇತರರಿದ್ದರು.

Published on

ಹೊಸಪೇಟೆ: ಬೆಂಗಳೂರಿನಲ್ಲಿ ಅಲೆಮಾರಿ ಸಿಳ್ಳೆಕ್ಯಾತ ಸಮುದಾಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿದವರನ್ನು ಬಂಧಿಸಬೇಕು ಹಾಗೂ ಬಾಲಕಿ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ನಗರದ ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾ ಸಿಳ್ಳೆಕ್ಯಾತ ಕ್ಷೇಮಾಭಿವೃದ್ಧಿ ಸಂಘ, ದಲಿತ, ಪಗ್ರತಿ ಪರ ಸಂಘಟನೆಗಳಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರಿಗೆ ದುಡಿಯಲು ಹೋಗಿದ್ದ ಕೊಪ್ಪಳ ಮೂಲದ ಬಾಲಕಿ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಸರ್ಕಾರ ಕೂಡಲೇ ಅಪರಾಧಿಗಳನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net