ಪ್ರಕರಣ 1: ಬಡಗುಳಿಪಾಡಿ ಗ್ರಾಮದ ಗಂಜಿಮಠ ಜಂಕ್ಷನ ಬಳಿ ಮಾದಕ ವಸ್ತು ಸೇವನೆ ಆರೋಪದಡಿ ಮಳಲಿ ಕ್ರಾಸ್ ನಿವಾಸಿ ಅಬ್ದುಲ್ ಲತ್ೀ (38) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಸೀಗರೆಟ್ ಸೇದುತ್ತಿರುವುದು ಕಂಡು ಬಂದಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸೀಗರೇಟಿನ ಒಳಗೆ ಮಾದಕ ವಸ್ತು ತುಂಬಿಸಿ ಸೇದಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಆರೋಪಿಯನ್ನು ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ. ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.