ಕಾನೂನು ಶಿಕ್ಷಣಕ್ಕೆ ಪ್ರತ್ಯೇಕ ನಿರ್ದೇಶನಾಲಯ

h8-K H patil Collage 1
Published on

ಹುಬ್ಬಳ್ಳಿ: ಕಾನೂನು ಶಿಕ್ಷಣಕ್ಕಾಗಿಯೇ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸುವ ಚಿಂತನೆ ನಡೆದಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ಇಲ್ಲಿಯ ವಿದ್ಯಾನಗರದ ಕೆ.ಎಚ್. ಪಾಟೀಲ ಕಾಲೇಜ್ ಕ್ಯಾಂಪಸ್‌ನಲ್ಲಿ ವೇಮನ ವಿದ್ಯಾವರ್ಧಕ ಸಂಘದ ಕೆ.ಎಚ್. ಪಾಟೀಲ ಸ್ಕೂಲ್ ಆಫ್ ಲಾ ಕಾಲೇಜ್‌ನ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಬೇರೆ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕದಲ್ಲಿ ಕಾನೂನು ಶಿಕ್ಷಣಕ್ಕೆ ಹೆಚ್ಚಿನ ಬೇಡಿಕೆ ಇದೆ. ಕಾನೂನು ಶಿಕ್ಷಣವನ್ನು ಎತ್ತರಕ್ಕೆ ಕೊಂಡೊಯ್ಯಲಾಗುವುದು. ಯಾವುದೇ ವೃತ್ತಿ ಹೊಂದಿದ್ದರೂ ಕಾನೂನು ಜ್ಞಾನ ಅತ್ಯಗತ್ಯ ಎಂದರು.

ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಕೆ.ಎಚ್. ಪಾಟೀಲರು ಈ ಭಾಗದ ಶ್ರೇಷ್ಠ ನಾಯಕರು. ಇಂದಿನ ರಾಜಕಾರಣಿಗಳಿಗೆ ಮಾದರಿ. ಹುಲಕೋಟಿಯನ್ನು ರಾಜಕೀಯ ಪವರ್ ಸೆಂಟರ್ ಮಾಡಿಕೊಂಡು ಇತರರಿಗೆ ರಾಜಕೀಯ ಜ್ಞಾನ ಬೋಧಿಸಿದ್ದರು ಎಂದರು.

ನೆಲ, ಜಲದ ಜತೆಗೆ ನಮ್ಮ ಸಂವಿಧಾನ ರಕ್ಷಣೆಯ ಅತ್ಯಗತ್ಯವಿದೆ. ಕೆಲವರು ಸಂವಿಧಾನದ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ನಾವೆಲ್ಲರೂ ಕಾನೂನು ಪಾಲನೆ ಮತ್ತು ಕಾಪಾಡಬೇಕಿದೆ. ದೇಶದಲ್ಲಿ 50 ಲಕ್ಷ ಪ್ರಕರಣಗಳು ಬಾಕಿ ಇವೆ. ಈ ನಿಟ್ಟಿನಲ್ಲಿ ಕಾಲೇಜ್‌ಗಳ ಸ್ಥಾಪನೆ ಅಗತ್ಯವೆಂದರು.

ಕರ್ನಾಟಕ ರಾಜ್ಯ ಕಾನೂನು ಆಯೋಗದ ಅಧ್ಯಕ್ಷ ಹಾಗೂ ವಿಶ್ರಾಂತ ನ್ಯಾಯಮೂರ್ತಿ ಅಶೋಕ ಹಿಂಚಿಗೇರಿ ಮಾತನಾಡಿ, ಮಾನವನಿಗೆ ಮಾತ್ರ ನಾಗರಿಕತೆಯ ಕಾನೂನು ಇದೆ. ಅಧ್ಯಯನದತ್ತ ಗಮನಹರಿಸಿಮ ಜ್ಞಾನ ಹೊಂದಿದರೆ ಮಾತ್ರ ಉನ್ನತ ಸ್ಥಾನ ಹೊಂದಲು ಸಾಧ್ಯ ಎಂದರು.

ವೇಮನ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಿ.ಆರ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಹಿರಿಯ ನ್ಯಾಯವಾದಿ ವಿ.ಜಿ. ಪಾಟೀಲ ಅವರು ಮಹಾತ್ಮ ಗಾಂಧೀಜಿ ಅವರಿಗೆ ಬ್ರಿಟಿಷರು ಪ್ರದಾನ ಮಾಡಿದ ಬ್ಯಾರಿಸ್ಟರ್ ಪದವಿಯ ಪೋಟೋಗ್ರಫಿಯನ್ನು ಕಾನೂನು ಸಚಿವ ಎಚ್.ಕೆ. ಪಾಟೀಲ ಅವರಿಗೆ ಕೊಡುಗೆಯಾಗಿ ನೀಡಿದರು. ಮಹೇಶ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಾಸಕ ಎನ್.ಎಚ್. ಕೋನರಡ್ಡಿ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ಸಿ. ಬಸವರಾಜು, ಮೌಲ್ಯಮಾಪನ ಕುಲಸಚಿವೆ ರತ್ನಾ ಭರಮಗೌಡರ, ರಿಜಿಸ್ಟ್ರಾರ್ ಗೀತಾ ಕೌಲಗಿ, ಕೆ.ಎಲ್. ಪಾಟೀಲ, ಡಾ. ಶಾರದಾ ನಿರ್ವಾಣಿ, ಮಾಜಿ ಸಂಸದ ಪ್ರೊ.ಐ.ಜಿ. ಸನದಿ, ವಕೀಲರಾದ ವಿ.ಜಿ. ಪಾಟೀಲ, ಕೆ.ಬಿ. ನಾವಲಗಿಮಠ, ಎಸ್.ಎಸ್. ಮಿಟ್ಟಲಕೋಡ, ವಿನಯ ಮಾಂಗಳೇಕರ, ಎಚ್.ಎಲ್. ವಿಶಾಲ ರಘು, ವಿ.ಡಿ. ಕಾಮರಡ್ಡಿ, ಸಿ.ಎಸ್. ಪಾಟೀಲ, ಆರ್.ಕೆ. ಪಾಟೀಲ, ಪಾಂಡುರಂಗ ಪಾಟೀಲ ಇತರರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net