

ದಾವಣಗೆರೆ: ಪರಿಶಿಷ್ಟ ಪಂಗಡಕ್ಕೆ ಇರುವ ಮೀಸಲಾತಿಯನ್ನು ಶೇ. 3 ರಿಂದ ಶೇ. 7.5 ಕ್ಕೆ ಹೆಚ್ಚಿಸಲು ತಾವು ಬದ್ಧರಾಗಿದ್ದು ನ್ಯಾ. ನಾಗಮೋಹನದಾಸ್ ವರದಿ ಬಂದ ತಕ್ಷಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಭಾನುವಾರ ನಡೆದ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಮೀಸಲಾತಿಗೆ ಸಂಬಂಧಿಸಿದ ವರದಿ ಸಲ್ಲಿಸುವಂತೆ ಸರ್ಕಾರದಿಂದ ಫೆ. 6 ರಂದು ಸಮಿತಿಗೆ ಲಿಖಿತ ಮನವಿ ಸಲ್ಲಿಸಲಾಗಿದೆ. ವರದಿ ಬಂದ ತಕ್ಷಣ ಜಾರಿಗೊಳಿಸಲಾಗುವುದು. ನಿಮ್ಮ ನಂಬಿಕೆ, ವಿಶ್ವಾಸಕ್ಕೆ ಧಕ್ಕೆ ತರುವುದಿಲ್ಲ. ಪರಿಶಿಷ್ಟ ಪಂಗಡಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವುದಾಗಿ ಭರವಸೆ ನೀಡಿದರು.
ಮುಂದಿನ 3 ವರ್ಷಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸರ್ಕಾರದಿಂದ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದರು