ಸರಣಿ ಅಪಘಾತ, ಹಲವರಿಗೆ ಗಾಯ

Lorry Accident
Published on

ಕೋಟ: ಟಿಪ್ಪರ್ ಚಾಲಕನ ನಿರ್ಲಕ್ಷೃದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಪೆಟ್ರೋಲ್ ಬಂಕ್ ಬಳಿ ಗುರುವಾರ ಸರಣಿ ಅಪಘಾತ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ.

ಟಿಪ್ಪರ್, ಟ್ಯಾಂಕರ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಸರಣಿ ಅಪಘಾತ ನಡೆದಿದೆ. ಕೋಟದಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಕೆಟ್ಟುಹೋಗಿದ್ದು, ಚಾಲಕ ರಸ್ತೆಯಲ್ಲೇ ನಿಲ್ಲಿಸಿದ್ದು, ವಾಹನ ಕೆಟ್ಟುಹೋದ ಬಗ್ಗೆ ಆತ ಕೋಟ ಪೊಲೀಸರಿಗಾಗಲಿ, ಟೋಲ್ ಸಿಬ್ಬಂದಿಗಾಗಲಿ ತಿಳಿಸಿಲ್ಲ. ಯಾವುದೇ ಎಚ್ಚರಿಕೆ ಸೂಚನಾ ಫಲಕ ಅಳವಡಿಸದೆ ಇರುವುದರಿಂದ, ಹಿಂದಿನಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಅದೇ ದಾರಿಯಲ್ಲಿ ಗೋಕರ್ಣದಿಂದ ಸುಬ್ರಹ್ಮಣ್ಯಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಟ್ಯಾಂಕರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಬಸ್ ಚಾಲಕ ಸೇರಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೋಟ ಪೊಲೀಸ್ ಠಾಣೆಯ ಎಸ್‌ಐ ಸುಧಾ ಪ್ರಭು, ಎಎಸ್‌ಐ ಗೋಪಾಲ ಪೂಜಾರಿ, ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ ಅಪಘಾತದ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net